ಬೆಂಗಳೂರು: ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಕೋವಿಡ್ 19 ವಾರ್ ರೂಂ ಗಳು ಮತ್ತು ತಪಾಸಣಾ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಂಡಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.
ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಈ ವಿಚಾರದ ಕುರಿತಾಗಿ ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳ ನಿರ್ದೇಶಕರ ಜೊತೆಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ. ಕೊರೋನಾ ಸೋಂಕು ಹರಡದಂತೆ ವಹಿಸಬಹುದಾದ ಎಚ್ಚರಿಕಾ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಿರುವುದಾಗಿ ಮಾಹಿತಿ ನೀಡಿದ್ದಾರೆ.
ಮಂಗಳೂರು, ಹಾಸನ, ಹುಬ್ಬಳ್ಳಿ, ಕಲಬುರಗಿ ಮೊದಲಾದ ಜಿಲ್ಲೆಗಳಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಜೊತೆಗೆ ರಾಜ್ಯದ ಪ್ರತಿ ಜಿಲ್ಲೆಗಳಲ್ಲೂ ಹೆಲ್ಪ್ ಡೆಸ್ಕ್ ಆರಂಭಿಸುವುದಕ್ಕೂ ತೀರ್ಮಾನಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಕಲಬುರ್ಗಿಯ ವೃದ್ಧನ ಸಾವಿಗೆ ಸಂಬಂಧಿಸಿದಂತೆ ಅವರ ಜೊತೆ ಸಂಪರ್ಕದಲ್ಲಿದ್ದ ಇತರರ ಆರೋಗ್ಯದ ಬಗ್ಗೆಯೂ ನಿಗಾ ವಹಿಸಲಾಗಿದೆ. ಜೊತೆಗೆ ಸೂಪರ್ ಮಾರ್ಕೆಟ್ ಗಳನ್ನು ಮುಚ್ಚುವುದಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿಗಳು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿರುವುದಾಗಿಯೂ ಅವರು ಈ ಸಂದರ್ಭ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.