ಜೈಪುರ: ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವ ಬೆನ್ನಲ್ಲೇ ಗುಜರಾತ್ ರಾಜ್ಯದ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ. ಮಾ. 26ಕ್ಕೆ ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ಗುಜರಾತ್ ನ ಕಾಂಗ್ರೆಸ್ ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸ್ಥಿತಿ ನಿರ್ಮಾಣವಾಗಿದೆ.
4 ಮಂದಿ ಕಾಂಗ್ರೆಸ್ ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದು, ಸದ್ಯ ಕಾಂಗ್ರೆಸ್ನ ಶಾಸಕರ ಸಂಖ್ಯೆ 69ಕ್ಕೆ ಇಳಿದಿದೆ. ಕಾಂಗ್ರೆಸ್ ಪಾಳಯದಲ್ಲಿ ಇನ್ನಷ್ಟು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಗಳಿದ್ದು, 37 ಶಾಸಕರನ್ನು ಜೈಪುರಕ್ಕೂ ರವಾನೆ ಮಾಡಿರುವುದಾಗಿ ತಿಳಿದು ಬಂದಿದೆ.
ಇತ್ತೀಚೆಗಷ್ಟೇ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ನ ರಾಹುಲ್ ಗಾಂಧಿಯ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ಗೆ ಗುಡ್ ಬೈ ಹೇಳಿ, ಬಿಜೆಪಿ ಸೇರಿದ್ದರು. ಇದಾದ ಬೆನ್ನಲ್ಲೇ ಈಗ ಗುಜರಾತ್ನಲ್ಲಿಯೂ ಕಾಂಗ್ರೆಸ್ ಪಕ್ಷದ ಶಾಸಕರು ರಾಜೀನಾಮೆ ನೀಡಿದ್ದು, ಹೀಗಾಗಿ ಗುಜರಾತಿನಲ್ಲಿ ಕಾಂಗ್ರೆಸ್ ಕಣ್ಮರೆಯಾಗುವ ಸ್ಥಿತಿ ನಿರ್ಮಾಣವಾಗಿದೆ.
182 ಸ್ಥಾನಗಳ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿಗೆ 103 ಸ್ಥಾನಗಳು, ಕಾಂಗ್ರೆಸ್ 73 ಸ್ಥಾನಗಳು, ಎರಡು ಸ್ಥಾನಗಳು ಭಾರತೀಯ ಟ್ರೈಬಲ್ ಪಾರ್ಟಿ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ ಒಂದು ಸ್ಥಾನಗಳಿವೆ. ಒಬ್ಬ ಸ್ವತಂತ್ರ ಶಾಸಕರೂ ಇದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.