ನವದೆಹಲಿ: ”ಪ್ರತಿಯೊಬ್ಬರೂ ಆರೋಗ್ಯವಾಗಿದ್ದಾರೆ ಮತ್ತು ರೋಗಲಕ್ಷಣಗಳನ್ನು ಹೊಂದಿರುವವರಿಗೆ ಸರಿಯಾದ ಆರೈಕೆ ಸಿಗುತ್ತದೆ” ಎಂದು ಖಚಿತ ಪಡಿಸಿಕೊಳ್ಳಲು ಭಾರತ ತನ್ನ ಅತ್ಯುತ್ತಮ ಪ್ರಯತ್ನವನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
“ನಮ್ಮ ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತರು ಹೆಚ್ಚಿನ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅವರು ಹೊರಗೆ ಇದ್ದಾರೆ, ಜನರಿಗೆ ಸಹಾಯ ಮಾಡುತ್ತಿದ್ದಾರೆ. ಅವರ ಕೊಡುಗೆಯನ್ನು ನಾವು ಯಾವಾಗಲೂ ಸ್ಮರಿಸುತ್ತೇವೆ. #IndiaFightsCorona” ಎಂದು ಮೋದಿ ತಮ್ಮ ಒಂದು ಟ್ವೀಟ್ನಲ್ಲಿ ಹೇಳಿದ್ದಾರೆ.
Many people are highlighting different aspects of how India is combating COVID-19.
This is certainly boosting the morale of all those doctors, nurses, municipal workers, airport staff and all other remarkable people at the forefront of fighting COVID-19. #IndiaFightsCorona
— Narendra Modi (@narendramodi) March 16, 2020
ಆರೋಗ್ಯ ಸೇವಾ ಕಾರ್ಯಕರ್ತರ ಪ್ರಯತ್ನಗಳನ್ನು ಶ್ಲಾಘಿಸಿದವರ ಟ್ವಿಟ್ಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ರಿಟ್ವಿಟ್ ಮಾಡಿದ್ದಾರೆ.
ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆಯನ್ನು ಸರ್ಕಾರ ಚುರುಕುಗೊಳಿಸಿದೆ, ಆರೋಗ್ಯ ವಲಯವು ಶಂಕಿತ ರೋಗಿಗಳನ್ನು ಪರೀಕ್ಷಿಸುತ್ತಿದೆ, ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದೆ ಮತ್ತು ಅಂತಾರಾಷ್ಟ್ರೀಯ ಪ್ರಯಾಣದ ಇತಿಹಾಸ ಹೊಂದಿರುವ ಜನರ ಮೇಲೆ ನಿಗಾ ಇಡುತ್ತಿದೆ ಎಂದಿದ್ದಾರೆ.
ಕೊರೋನವೈರಸ್ ತಡೆಗಟ್ಟುವಲ್ಲಿ ಆರೋಗ್ಯ ಕಾರ್ಯಕರ್ತರು ನಿಜಕ್ಕೂ ಅಮೋಘವಾದ ಕೊಡುಗೆಗಳನ್ನು ನೀಡುತ್ತಿದ್ದಾರೆ. ಸಾಮಾನ್ಯ ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ, ಆದರೆ ಆರೋಗ್ಯ ಕ್ಷೇತ್ರದಲ್ಲಿರುವ ವೈದ್ಯರು, ದಾದಿಯರು ಮತ್ತು ಸಿಬ್ಬಂದಿಗಳು ಹಿಂದಿಗಿಂತ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ತಮ್ಮ ಆರೋಗ್ಯಕ್ಕಿಂತ ಜನರ ಆರೋಗ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.