ನವದೆಹಲಿ: ತಮ್ಮ ಫೋಟೋಗಳು, ಸುದ್ದಿಗಳು ಮಾಧ್ಯಮಗಳಲ್ಲಿ ಬರಲಿ ಎಂಬ ಕಾರಣಕ್ಕೆ ತಾವು ಭೇಟಿ ನೀಡುತ್ತಿರುವ ಪ್ರದೇಶಗಳಿಗೆಲ್ಲಾ ಕ್ಯಾಮೆರಾಮೆನ್ಗಳನ್ನು ಕರೆದುಕೊಂಡು ಹೋಗುತ್ತಿರುವ ರಾಜಕಾರಣಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಪರೋಕ್ಷ ಟಾಂಗ್ ನೀಡಿದ್ದಾರೆ.
ಭಾರತದ ಬಡತನವನ್ನು ಅರ್ಥಮಾಡಿಕೊಳ್ಳಲು ಹೋದಲೆಲ್ಲಾ ಕ್ಯಾಮರಾಮೆನ್ಗಳನ್ನು ಕರೆದುಕೊಂಡು ಹೋಗಬೇಕಾದ ಅನಿವಾರ್ಯತೆ ನನಗಿಲ್ಲ ಎಂದು ಅವರು ಹೇಳಿದ್ದಾರೆ.
‘ನಾನು ಬಡತನವನ್ನು ನೋಡಿದ್ದೇನೆ, ಅವರ ಕಷ್ಟವನ್ನು ಅರ್ಥ ಮಾಡಿಕೊಳ್ಳಲು ನನಗೆ ಕಷ್ಟವಾಗುವುದಿಲ್ಲ. ಬಡತವನ್ನು ಅರಿಯಲು ಕ್ಯಾಮೆರಾಮೆನ್ಗಳನ್ನು ಒಟ್ಟಿಗೆ ಕರೆದುಕೊಂಡು ಹೋಗಬೇಕಾದ ಅನಿವಾರ್ಯತೆ ನನಗಿಲ್ಲ, ಬಡವರಿಗಾಗಿ ಏನನ್ನಾದರು ಮಾಡುವ ತುಡಿತ ನನ್ನಲ್ಲಿದೆ’ ಎಂದು ಮೋದಿ ಹೇಳಿಕೊಂಡಿದ್ದಾರೆ.
ಈ ಮೂಲಕ ಬಡವರ ಮನೆಗಳಿಗೆ ಭೇಟಿ ನೀಡುವ ವೇಳೆ ಸದಾ ಪತ್ರಕರ್ತರನ್ನೂ ಜೊತೆಗೆ ಕರೆದುಕೊಂಡು ಹೋಗುವ ರಾಜಕಾರಣಿಗಳನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.