ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಪ್ರಜಾಪ್ರಭುತ್ವ ಅಥವಾ ಜಾತ್ಯತೀತ ಹಕ್ಕುಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಸಿಎಎ ಸಂಸತ್ತಿನ ಸಾರ್ವಭೌಮ ಅಧಿಕಾರಕ್ಕೆ ಸಂಬಂಧಿಸಿದ ವಿಷಯವಾಗಿದೆ ಮತ್ತು ನ್ಯಾಯಾಲಯದ ಮುಂದೆ ಅದನ್ನು ಪ್ರಶ್ನಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ಗೆ ಸರ್ಕಾರ ಹೇಳಿದೆ.
“ಸಿಎಎ ನಾಗರಿಕರ ಅಸ್ತಿತ್ವದಲ್ಲಿರುವ ಯಾವುದೇ ಹಕ್ಕುಗಳಿಗೆ ಅಡ್ಡಿಯಾಗುವುದಿಲ್ಲ. ಇದು ಜನರ ಕಾನೂನು, ಪ್ರಜಾಪ್ರಭುತ್ವ ಅಥವಾ ಜಾತ್ಯತೀತ ಹಕ್ಕುಗಳ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಸರ್ಕಾರ ಸುಪ್ರೀಂಕೋರ್ಟ್ಗೆ ನೀಡಿದ ಪ್ರಾಥಮಿಕ ಅಫಿಡವಿಟ್ನಲ್ಲಿ ತಿಳಿಸಿದೆ.
“ಸಿಎಎ ಸಂಪೂರ್ಣವಾಗಿ ಕಾನೂನಾತ್ಮಕ ಮತ್ತು ಸಾಂವಿಧಾನಿಕವಾಗಿದೆ” ಎಂದು ಅದು ಪ್ರತಿಪಾದಿಸಿದೆ.
ಡಿಸೆಂಬರ್ನಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿದ ಸಿಎಎಯು ನೆರೆಯ ಪಾಕಿಸ್ಥಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನದಲ್ಲಿ ಧಾರ್ಮಿಕ ಕಿರುಕುಳವನ್ನು ಅನುಭವಿಸಿ ಭಾರತದ ಆಶ್ರಯ ಕೇಳಿ ಬಂದ ಅಲ್ಲಿನ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಮಸೂದೆಯಾಗಿದೆ. 2015ರೊಳಗೆ ಭಾರತಕ್ಕೆ ಬಂದವರಿಗೆ ಮಾತ್ರ ಇದು ಅನ್ವಯವಾಗುತ್ತದೆ.
“ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು ಮೀಸಲಿಡಲು ಸಂಸತ್ತು ಸಮರ್ಥವಾಗಿದೆ” ಎಂದು ಕೇಂದ್ರ ಹೇಳಿದೆ.
“ಸಮಂಜಸವಾದ ವರ್ಗೀಕರಣ”ದ ಸಿದ್ಧಾಂತವು ಕೆಲವು ಸಂದರ್ಭಗಳಲ್ಲಿ ಕಾನೂನಿನ ಸಮಾನ ಅನ್ವಯದಿಂದ ವಿನಾಯಿತಿಗಳನ್ನು ನೀಡುತ್ತದೆ ಎಂದು ಕೇಂದ್ರ ವಾದಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.