ನವದೆಹಲಿ: ಕೊರೋನವೈರಸ್ ವಿರುದ್ಧ ಹೋರಾಡಲು ಭಾರತ ಸರ್ಕಾರ ಮತ್ತು ಪ್ರಧಾನ ಮಂತ್ರಿ ಕಚೇರಿಯು ನಡೆಸುತ್ತಿರುವ ಪ್ರಯತ್ನಗಳನ್ನು ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಶ್ಲಾಘಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ಭಾರತ ರಾಯಭಾರಿ ಹೆಂಕ್ ಬೆಕೆಡಂ ಅವರು, ಕೊರೋನವೈರಸ್ ತಡೆಗಟ್ಟಲು ಭಾರತ ಸರ್ಕಾರ ನಡೆಸುತ್ತಿರುವ ಕಾರ್ಯಗಳನ್ನು ಅವರು ಶ್ಲಾಘಿಸಿದ್ದಾರೆ.
ಭಾರತದ ನಡೆಸುತ್ತಿರುವ ಅಗಾಧ ಪ್ರಯತ್ನಗಳನ್ನು ಬಹಳ ಪರಿಣಾಮಕಾರಿ ಎಂದು ಅವರು ಬಣ್ಣಿಸಿದ್ದು, ಕೊರೋನವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಭಾರತವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಭಾರತದ ಪ್ರಯತ್ನಗಳಿಂದ ತಾನು ಪ್ರಭಾವಿತಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಅವರು ಭಾರತದ ಸಂಶೋಧನಾ ಸಾಮರ್ಥ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು, ವಿಶೇಷವಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಐಸಿಎಂಆರ್ SARS-CoV-2 ವೈರಸ್ನ 11 ತಳಿಗಳನ್ನು ಪ್ರತ್ಯೇಕಿಸಿ ಲಸಿಕೆ ಹಾಕುವ ಕೆಲಸ ಮಾಡುತ್ತಿದೆ.
ಬೆಕೆಡಮಂ ಪ್ರಕಾರ, ಭಾರತವು ಕೊರೋನವೈರಸ್ ವಿರುದ್ಧ ಜಾಗತಿಕ ಸಂಶೋಧನಾ ಸಮುದಾಯದ ಭಾಗವಾಗಿ ಮುಂದುವರಿಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.