ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಸೋಮವಾರ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಅವರು ಟೀಕಾಕಾರರಿಗೆ ತಿರುಗೇಟು ನೀಡಿದ್ದು, ಪ್ರಮಾಣವಚನ ಸ್ವೀಕರಿಸಿದ ಬಳಿಕ ನಾಮನಿರ್ದೇಶನವನ್ನು ಒಪ್ಪಿಕೊಂಡಿರುವ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.
ಮಂಗಳವಾರ ಮೇಲ್ಮನೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ನಾಮಪತ್ರ ಸ್ವೀಕರಿಸಿರುವ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
“ನಾನು ಬಹುಶಃ ನಾಳೆ ದೆಹಲಿಗೆ ಹೋಗುತ್ತೇನೆ. ಮೊದಲು ಪ್ರಮಾಣವಚನ ಸ್ವೀಕರಿಸುತ್ತೇನೆ, ನಂತರ ನಾನು ಇದನ್ನು ಏಕೆ ಒಪ್ಪಿಕೊಂಡೆ ಎಂದು ಮಾಧ್ಯಮಗಳೊಂದಿಗೆ ವಿವರವಾಗಿ ಮಾತನಾಡುತ್ತೇನೆ” ಎಂದು ಗೋಗೊಯ್ ಅಸ್ಸಾಂನ ಗುವಾಹಟಿಯಲ್ಲಿ ಮಾಧ್ಯಮಗಳಿಗೆ ತಿಳಿಸಿದರು.
ಗೋಗೊಯ್ ಅವರನ್ನು ಸೋಮವಾರ ರಾಷ್ಟ್ರಪತಿ ಕೋವಿಂದ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಿದ್ದಾರೆ. ಅಧಿಸೂಚನೆಯಲ್ಲಿ, “ಭಾರತದ ಸಂವಿಧಾನದ 80 ನೇ ಪರಿಚ್ಛೇದ (1) ರ ಉಪ-ಷರತ್ತು (ಎ) ನಿಂದ ನೀಡಲ್ಪಟ್ಟ ಅಧಿಕಾರವನ್ನು ಬಳಸಿಕೊಂಡ ಆ ಪರಿಚ್ಛೇದದ ಷರತ್ತು (3) ನೊಂದಿಗೆ ರಂಜನ್ ಅವರನ್ನು ನಾಮನಿರ್ದೇಶನ ಮಾಡಲು ರಾಷ್ಟ್ರಪತಿಗಳು ಸಂತೋಷಗೊಂಡಿದ್ದಾರೆ. ನಾಮನಿರ್ದೇಶಿತ ಸದಸ್ಯರೊಬ್ಬರ ನಿವೃತ್ತಿಯಿಂದ ಉಂಟಾದ ಖಾಲಿ ಹುದ್ದೆಯನ್ನು ಗೊಗೊಯ್ ತುಂಬಲಿದ್ದಾರೆ” ಎಂದಿದ್ದಾರೆ.
ಆದರೆ ಗೋಗೊಯ್ ಅವರ ನಾಮನಿರ್ದೇಶನಕ್ಕೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿವೆ. ಇದು ಭವಿಷ್ಯದ ಸಿಜೆಐಗಳಿಗೆ ತಪ್ಪು ಸಂದೇಶ ರವಾನಿಸುತ್ತಿದೆ ಎಂದು ಆರೋಪಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.