ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ರಾಜ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಂಗಳವಾರ ದೂರವಾಣಿ ಸಂಭಾಷಣೆ ನಡೆಸಿ, ಕೊರೋನವೈರಸ್ ಸೋಂಕಿನ ವಿರುದ್ಧ ಜಾಗತಿಕ ಸವಾಲನ್ನು ಎದುರಿಸಲು ಸಂಘಟಿತ ಪ್ರಯತ್ನಗಳ ಅಗತ್ಯತೆಯ ಬಗ್ಗೆ ಚರ್ಚಿಸಿದರು.
ದೂರವಾಣಿ ಸಂಭಾಷಣೆಯ ವೇಳೆ ಮೋದಿಯವರು, ಸಾಂಕ್ರಾಮಿಕ ರೋಗದ ಬಗ್ಗೆ ಸಾರ್ಕ್ ದೇಶಗಳ ನಾಯಕರ ವಿಡಿಯೋ ಕಾನ್ಫರೆನ್ಸ್ ಆಯೋಜಿಸಿದ ಬಗ್ಗೆ ಮತ್ತು ಭಾರತವು ಸೋಂಕು ತಡೆಗೆ ತೆಗೆದುಕೊಂಡ ಉಪಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆಯಲ್ಲಿ ತಿಳಿಸಿದೆ.
ಜಿ-20 ನಾಯಕರ ಮಟ್ಟದಲ್ಲಿ ಇದೇ ರೀತಿಯ ಪ್ರಕ್ರಿಯೆಯನ್ನು ಜಾಗತಿಕ ಮಟ್ಟದಲ್ಲಿ ನಡೆಸುವುದು ಉಪಯುಕ್ತ ಎಂದು ಉಭಯ ನಾಯಕರು ಅಭಿಪ್ರಾಯಿಸಿದ್ದಾರೆ.
COVID-19 ಜಾಗತಿಕ ಸಮಸ್ಯೆಯನ್ನು ಎದುರಿಸುವ ಸವಾಲುಗಳನ್ನು ಎದುರಿಸಲು ನಿರ್ದಿಷ್ಟ ಕ್ರಮಗಳನ್ನು ಚರ್ಚಿಸಲು ಮತ್ತು ಜಾಗತಿಕ ಜನಸಂಖ್ಯೆಯಲ್ಲಿ ವಿಶ್ವಾಸವನ್ನು ಮೂಡಿಸಲು ಈ ಪ್ರಕ್ರಿಯೆಯನ್ನು ಬಳಸಬಹುದಾಗಿದೆ.
ಹಲವಾರು ಲಕ್ಷ ಜನರ ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ಮಾತ್ರವಲ್ಲದೇ, ವಿಶ್ವದ ಹಲವು ಭಾಗಗಳಲ್ಲಿನ ಆರ್ಥಿಕತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದುವ ಕೊರೊನಾವೈರಸ್ ವಿರುದ್ಧ ಹೋರಾಡಲು ದೇಶಗಳಲ್ಲಿ ಸಮನ್ವಯದ ಅಗತ್ಯವನ್ನು ಪ್ರಧಾನಿ ಮೋದಿ ಚರ್ಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.