ನವದೆಹಲಿ: ಕೊರೋನವೈರಸ್ ಸೋಂಕು ವಿಶ್ವವನ್ನು ಬಾಧಿಸಿದ ನಂತರ ಜನರ ಆಚಾರ ವಿಚಾರಗಳಲ್ಲಿ ಮಹತ್ವದ ಬದಲಾವಣೆಗಳು ಆಗಿವೆ. ಜನರು ಇತರರನ್ನು ಸ್ವಾಗತಿಸುವ ರೀತಿಯಲ್ಲಿ ಮತ್ತು ತಮ್ಮ ವರ್ತನೆಯಲ್ಲಿ ಬದಲಾವಣೆಯನ್ನು ತರುತ್ತಿದ್ದಾರೆ. ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯವು ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಪ್ರಕಾರ, ಅಮೆರಿಕದ ನಾಗರಿಕರು ತಮ್ಮ ಪದ್ಧತಿಗಳನ್ನು ಬದಲಾಯಿಸಿಕೊಳ್ಳುತ್ತಿದ್ದಾರೆ ಮತ್ತು ಕೋವಿಡ್ -19 ನಿಂದ ತಮ್ಮನ್ನು ರಕ್ಷಿಸುವ ಸಲುವಾಗಿ ತಮ್ಮ ನಡವಳಿಕೆಯಲ್ಲಿ ಪರಿವರ್ತನೆ ತರುತ್ತಿದ್ದಾರೆ.
ಸಮೀಕ್ಷೆಯ ಪ್ರಕಾರ, ಸಮೀಕ್ಷೆ ನಡೆಸಿದವರಲ್ಲಿ ಶೇಕಡಾ 85 ರಷ್ಟು ಜನರು ಆಗಾಗ್ಗೆ ಕೈ ತೊಳೆದುಕೊಳ್ಳುತ್ತಿದ್ದಾರೆ ಅಥವಾ ಸ್ಯಾನಿಟೈಜರ್ಗಳನ್ನು ಬಳಸುತ್ತಿದ್ದಾರೆ ಎಂದು ಕಂಡುಬಂದಿದೆ, ಆದರೆ ಭಾಗವಹಿಸಿದವರಲ್ಲಿ ಶೇ.61ರಷ್ಟು ಜನರು ಸಾಮಾಜಿಕ ದೂರವನ್ನು ಕಾಯ್ದುಕೊಳ್ಳುತ್ತಿದ್ದಾರೆ ಎಂದು ಅಧ್ಯಯನ ಹೇಳಿದೆ.
ಸಮೀಕ್ಷೆಗೆ ಒಳಪಟ್ಟವರಲ್ಲಿ ಸುಮಾರು ಶೇ.25 ರಷ್ಟು ಜನರು ರೆಸ್ಟೋರೆಂಟ್ಗಳಿಗೆ ಹೋಗುವುದ ತಪ್ಪಿಸಿದರೆ, ಸುಮಾರು ಶೇ. 22 ರಷ್ಟು ಜನರು ಆಹಾರ ಮತ್ತು ನೀರನ್ನು ಸಂಗ್ರಹಿಸಿಡುತ್ತಿದ್ದಾರೆ
ಸಮೀಕ್ಷೆಗೆ ಒಳಪಟ್ಟವರಲ್ಲಿ ಅರ್ಧದಷ್ಟು ಜನರು ಬಿಕ್ಕಟ್ಟು ನಿವಾರಣೆಯಾಗಬೇಕೆಂದು ಪ್ರಾರ್ಥನೆ ಮಾಡುತ್ತಿದ್ದಾರೆ. ವೈರಸ್ ಹರಡುವಿಕೆಯ ವಿರುದ್ಧ ಹೋರಾಡಲು ಮುಖಗವಸುಗಳನ್ನು ಬಳಸುತ್ತಿದ್ದೇವೆ ಎಂದು ಶೇ. 7 ಕ್ಕಿಂತ ಕಡಿಮೆ ಜನರು ಹೇಳಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ಕೋವಿಡ್ -19 ಪ್ರಪಂಚದಾದ್ಯಂತ 180,000 ಕ್ಕೂ ಹೆಚ್ಚು ಜನರಿಗೆ ತಗುಲಿದ್ದು, ವಿಶ್ವದಾದ್ಯಂತ 6,000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ.
ಭಾರತದಲ್ಲಿ, ಧನಾತ್ಮಕ ಪ್ರಕರಣಗಳ ಸಂಖ್ಯೆ 130 ಕ್ಕಿಂತ ಹೆಚ್ಚಾಗಿದೆ. ದೇಶದಲ್ಲಿ ಕೊರೋನವೈರಸ್ನಿಂದ ಮೂರು ಜನರು ಸಾವನ್ನಪ್ಪಿದ್ದರೆ, 14 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.