ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಮಂಗಳವಾರದಿಂದ ಆರಂಭಗೊಳ್ಳಲಿದೆ. ಹಲವು ಮಹತ್ವಪೂರ್ಣ ಮಸೂದೆಗಳನ್ನು ಜಾರಿಗೊಳಿಸುವ ವಿಶ್ವಾಸದಲ್ಲಿ ಸರ್ಕಾರವಿದ್ದರೆ, ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿ ವಿವಾದವನ್ನು ಹಿಡಿದು ಕಲಾಪಕ್ಕೆ ಅಡ್ಡಿಪಡಿಸಲು ಪ್ರತಿಪಕ್ಷಗಳು ಯೋಜನೆ ರೂಪಿಸಿವೆ.
ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ತಿನ ಹೊರಗಡೆ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ದೇಶವನ್ನು ಮುಂದಕ್ಕೆ ಕೊಂಡೊಯ್ಯಲು ಎಲ್ಲರು ಸೇರಿ ಮಹತ್ವಪೂರ್ಣ ನಿರ್ಧಾರಗಳನ್ನು ಕೈಗೊಳ್ಳಬೇಕು, ಇದಕ್ಕಾಗಿ ನಾವು ನಿರಂತರ ಪ್ರಯತ್ನ ಮಾಡುತ್ತೇವೆ. ಮುಂದಿನ ಅಧಿವೇಶನದಲ್ಲಿ ಕಾರ್ಯವನ್ನು ಪ್ರಿಯಾರಿಟಿ ಆಧಾರದಲ್ಲಿ ಮಾಡಲು ಅನುವು ಮಾಡಿಕೊಡುತ್ತೇವೆ ಎಂದು ಕೆಲ ಪಕ್ಷಗಳ ಮುಖಂಡರು ಹಿಂದಿನ ಅಧಿವೇಶನದ ವೇಳೆ ಮಾತುಕೊಟ್ಟಿದ್ದರು. ಆ ಮಾತನ್ನು ಉಳಿಸುತ್ತಾರೆ ಎಂದು ನಂಬಿದ್ದೇವೆ’ ಎಂದಿದ್ದಾರೆ.
ಈ ಅಧೀವೇಶನದಲ್ಲಿ ಹೆಚ್ಚಿನ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ ಎಂಬ ನಂಬಿಕೆ ಇದೆ. ಉತ್ತಮ ಚರ್ಚೆಗಳು ನಡೆಯಲಿದೆ. ಎಲ್ಲಾ ಪಕ್ಷಗಳೂ ಸಾಥ್ ನೀಡಲಿವೆ. ಪ್ರತಿ ಸಂಸದರೂ ತಮ್ಮ ತಮ್ಮ ಕೊಡುಗೆಗಳನ್ನು ನೀಡಲಿದ್ದಾರೆ ಎಂಬ ಭರವಸೆಯೊಂದಿಗೆ ಅಧಿವೇಶನ ಆರಂಭಿಸುತ್ತೇವೆ ಎಂದಿದ್ದಾರೆ.
ಇಂದಿನಿಂದ ಆರಂಭವಾಗಿ ಆಗಸ್ಟ್ 11ರವರೆಗೆ ಮುಂಗಾರು ಅಧಿವೇಶನ ನಡೆಯಲಿದೆ. ಲಲಿತ್ ಮೋದಿ ವಿವಾದದಲ್ಲಿ ಸಿಲುಕಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಎನ್ಡಿಎಯನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.