ಬೆಂಗಳೂರು: ರಾಜ್ಯದಲ್ಲಿ ಪ್ರತಿನಿತ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಲೇ ಇದ್ದಾರೆ. ಪರಿಸ್ಥಿತಿ ಬಿಗಡಾಯಿಸುವ ಸ್ಥಿತಿ ತಲುಪಿದರೂ ರಾಜ್ಯ ಸರ್ಕಾರಕ್ಕೆ ರೈತರ ಸರಣಿ ಆತ್ಮಹತ್ಯೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಇದೀಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ರಾಜ್ಯಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸಲು ನಿರ್ಧರಿಸಿದ್ದಾರೆ.
ಮೂಲಗಳ ಪ್ರಕಾರ ಜುಲೈ 27ರಂದು ರಾಹುಲ್ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಅಲ್ಲದೇ ಮೃತಪಟ್ಟ ರೈತರ ಮನೆಗೂ ಭೇಟಿ ನೀಡಲಿದ್ದಾರೆ.
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಎಐಸಿಸಿ ಕಾರ್ಯದರ್ಶಿ ಡಾ.ಚಲ್ಲಕುಮಾರ್ ಅವರು ರಾಹುಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ಅಲ್ಲದೇ ರಾಜ್ಯಕ್ಕೆ ಭೇಟಿ ಕೊಡುವಂತೆ ಮನವಿ ಮಾಡಿದ್ದರು ಎಂದು ಹೇಳಲಾಗಿದೆ.
ರಾಹುಲ್ ಭೇಟಿಯ ಬಳಿಕವಾದರೂ ರೈತರ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕೈಗೊಳ್ಳುವುದೇ ಎಂದು ಕಾದು ನೋಡಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.