ನವದೆಹಲಿ: ನಾಳೆ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಅನ್ನು ಆಚರಿಸಲಾಗುತ್ತಿರುವುದರಿಂದ ಇಂದು ಮಧ್ಯರಾತ್ರಿಯಿಂದ ನಾಳೆ ರಾತ್ರಿ 10 ಗಂಟೆಯವರೆಗೆ ರೈಲು ಸೇವೆ ಸ್ಥಗಿತಗೊಳ್ಳಲಿದೆ.
ಭಾರತೀಯ ರೈಲ್ವೆ COVID-19 ವೈರಸ್ ಹರಡುವುದನ್ನು ತಡೆಯಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ. ಎಲ್ಲಾ ವಲಯಗಳಲ್ಲಿ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ. ಕೆಲವು ದೂರದ ರೈಲುಗಳನ್ನು ಒಳಗೊಂಡಂತೆ ಅನೇಕ ವಿಭಾಗಗಳಿಗೆ ವಿಶೇಷ ರೈಲನ್ನು ತಾತ್ಕಾಲಿಕವಾಗಿ ತೆಗೆದುಹಾಕುವ ಮೂಲಕ ಪ್ರಯಾಣಿಕರು ಅನಿವಾರ್ಯವಲ್ಲದ ಪ್ರಯಾಣ ಕೈಗೊಳ್ಳುವುದನ್ನು ನಿರುತ್ಸಾಹಗೊಳಿಸಲು ಭಾರತೀಯ ರೈಲ್ವೆ ಕ್ರಮ ಕೈಗೊಂಡಿದೆ.
ನಾಳೆ ಜನತಾ ಕರ್ಫ್ಯೂ ಆಚರಿಸಲು ಪ್ರಧಾನಿ ನರೇಂದ್ರ ಮೋದಿಯವರ ಕರೆ ಮತ್ತು ಪ್ರಯಾಣಿಕರ ಸಂಖ್ಯೆಯಲ್ಲಿನ ತೀವ್ರ ಕುಸಿತವನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರೈಲ್ವೆ ರೈಲುಗಳ ಸಂಖ್ಯೆಯನ್ನು ಕಡಿಮೆ ಮಾಡಿದೆ. ಅದೇ ಹಿನ್ನೆಲೆಯಲ್ಲಿ, ಇಂದು ಮಧ್ಯರಾತ್ರಿಯಿಂದ ನಾಳೆ ರಾತ್ರಿ 10 ರವರೆಗೆ ಪ್ರಯಾಣಿಕರ ರೈಲುಗಳು ರದ್ದಾಗಿವೆ.
ಸುಮಾರು 300 ದೂರ ಪ್ರಯಾಣದ ಮೇಲ್ ಮತ್ತು ಎಕ್ಸ್ಪ್ರೆಸ್ ರೈಲುಗಳನ್ನು ಸಹ ಸ್ಥಗಿತಗೊಳಿಸಲಾಗಿದ್ದು, ಕೆಲವು ಅಗತ್ಯ ಸಂಚಾರಗಳನ್ನು ಹೊರತುಪಡಿಸಿ, ಮುಂಬೈ, ದೆಹಲಿ, ಕೋಲ್ಕತಾ, ಚೆನ್ನೈ ಮತ್ತು ಸಿಕಂದರಾಬಾದಿನಲ್ಲಿ ಉಪನಗರ ರೈಲು ಸೇವೆಗಳನ್ನು ಸಹ ಕಡಿಮೆಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.