ಲಂಡನ್ : ಕೊರೋನವೈರಸ್ ಮಹಾಮಾರಿಯನ್ನು ಸೋಲಿಸಲು ಕೇವಲ ದೇಶಗಳನ್ನು ಲಾಕ್ಡೌನ್ ಮಾಡಿದರೆ ಸಾಲದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ತುರ್ತು ವೈದ್ಯಕೀಯ ಪರಿಸ್ಥಿತಿಯ ತಜ್ಞರು ಹೇಳಿದ್ದಾರೆ.
ನಂತರದ ದಿನಗಳಲ್ಲಿ ಮತ್ತೆ ವೈರಸ್ ಹುಟ್ಟಿಕೊಳ್ಳುವುದನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ.
“ನಾವು ಮಾಡಬೇಕಾಗಿರುವುದು ಏನೆಂದರೆ, ಅನಾರೋಗ್ಯ ಪೀಡಿತರನ್ನು ಗುರುತಿಸುವುದು, ವೈರಸ್ ಇರುವವರನ್ನು ಗುರುತಿಸುವುದು ಮತ್ತು ಅವರನ್ನು ಪ್ರತ್ಯೇಕ ವಾಸದಲ್ಲಿ ಇರಿಸುವುದು. ಅವರೊಂದಿಗೆ ಸಂಪರ್ಕದಲ್ಲಿ ಇದ್ದವರನ್ನೂ ಗುರುತಿಸಿ ಪ್ರತ್ಯೇಕವಾಸದಲ್ಲಿ ಇರಿಸುವುದು” ಎಂದು ತಜ್ಞ ಮೈಕ್ ರಿಯಾನ್ ಹೇಳಿದ್ದಾರೆ.
“ಲಾಕ್ಡೌನ್ನಿಂದ ಆಗುವ ಅಪಾಯವೆಂದರೆ, ಒಂದು ವೇಳೆ ನಾವು ಈಗ ಬಲಿಷ್ಠ ಆರೋಗ್ಯ ಕ್ರಮಗಳನ್ನು ಅನುಷ್ಠಾನಗೊಳಿಸದಿದ್ದರೆ ಲಾಕ್ಡೌನ್ ತೆರವಿನ ಬಳಿಕ ನಿರ್ಬಂಧಗಳು ಮುಕ್ತಾಯವಾದಾಗ ಮತ್ತೆ ವೈರಸ್ ವೃದ್ಧಿಯಾಗುವ ಸಾಧ್ಯತೆಯಿದೆ” ಎಂದಿದ್ದಾರೆ.
ಅಮೆರಿಕ, ಏಷ್ಯಾ ಮತ್ತು ಯುರೋಪ್ ರಾಷ್ಟ್ರಗಳು ವೈರಸ್ ಅನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಿದೆ. ಶಾಲೆಗಳನ್ನು, ಪಬ್, ಬಾರ್ ರೆಸ್ಟೋರೆಂಟ್ಗಳನ್ನು ಮುಚ್ಚಿಸಿದೆ. ಸಭೆ-ಸಮಾರಂಭಗಳು ನಡೆಯದಂತೆ ನೋಡಿಕೊಂಡಿದೆ.
” ಒಂದು ಬಾರಿ ನಾವು ಹರಡುವಿಕೆಯನ್ನು ತಡೆಗಟ್ಟಿದ ಬಳಿವೂ ನಾವು ವೈರಸ್ ವಿರುದ್ಧದ ಹೋರಾಟವನ್ನು ಮುಂದುವರೆಸಬೇಕು” ಎಂದು ಮೈಕ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.