×
Home About Us Advertise With s Contact Us

COVID-19 ಮಾಹಿತಿಗಾಗಿ ವೆಬ್‌ಸೈಟ್ ಆರಂಭಿಸಿದ ಸಾರ್ಕ್ ವಿಪತ್ತು ನಿರ್ವಹಣಾ ಕೇಂದ್ರ

ನವದೆಹಲಿ: ಕೊರೋನವೈರಸ್‌ಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡುವ ಸಲುವಾಗಿ ವಿಪತ್ತು ನಿರ್ವಹಣಾ ಕೇಂದ್ರವು ವೆಬ್‌ಸೈಟ್ ಅನ್ನು ಪ್ರಾರಂಭಿಸಿದೆ.

ಈ ವೆಬ್­ಸೈಟಿನಲ್ಲಿ ಸಾರ್ಕ್ ಸದಸ್ಯ ರಾಷ್ಟ್ರಗಳಲ್ಲಿ ಸಂಭವಿಸುತ್ತಿರುವ ಸಾವುಗಳ ಮತ್ತು ಪ್ರಕರಣಗಳ ಅಂಕಿ-ಅಂಶಗಳನ್ನು ನೀಡಲಾಗುತ್ತಿದೆ. www.covid-19-sdmc.org. ಎಂಬುದು ವೆಬ್‌ಸೈಟಿನ ಲಿಂಕ್ ಆಗಿದೆ.

ಕೆಲವು ದಿನಗಳ ಹಿಂದೆ ಸಾರ್ಕ್ ಸದಸ್ಯ ರಾಷ್ಟ್ರಗಳ ನಾಯಕರುಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು, ಕೋವಿಡ್ 19 ತುರ್ತು ಸಾರ್ಕ್ ನಿಧಿಯನ್ನು ರಚನೆ ಮಾಡುವ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಇದಕ್ಕೆ ಭೂತಾನ್, ನೇಪಾಳ ಮತ್ತು ಕೆಲವು ದೇಶಗಳು ಧನ ಸಹಾಯವನ್ನೂ ನೀಡಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top