ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರವಾಗಿದ್ದ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕನನ್ನು ಅಮಾನತುಗೊಳಿಸಲಾಗಿದೆ.
ಸಿಎಎಗೆ ಪರವಾಗಿದ್ದ 15 ಮುಸ್ಲಿಮೇತರ ವಿದ್ಯಾರ್ಥಿಗಳನ್ನು ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸಿದ್ದ ಸಹಾಯಕ ಪ್ರಾಧ್ಯಾಪಕ ಡಾ. ಅಬ್ರಾರ್ ಅಹ್ಮದ್ ಅವರನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಅಮಾನತುಗೊಳಿಸಿ ವಿಚಾರಣೆಗೆ ಆದೇಶಿಸಿದೆ. ಈ ಬಗ್ಗೆ ಅದು ತನ್ನ ಟ್ವಿಟರ್ ಖಾತೆಯಲ್ಲಿ ಸ್ಪಷ್ಟಪಡಿಸಿದೆ.
Dr. Abrar Ahmad, Asstt Professor of @jmiu_official tweeted in public domain as to failing 15 non-muslim students in an exam. This is a serious misconduct inciting communal disharmony under CCS CONDUCT RULES.The university suspends him pending inquiry.@DrRPNishank @HRDMinistry
— Jamia Millia Islamia (Central University) (@jmiu_official) March 25, 2020
ಡಾ. ಅಬ್ರಾರ್ ಅಹ್ಮದ್ ಮಾರ್ಚ್ 25ರಂದು ತಮ್ಮ ಟ್ವೀಟರ್ನಲ್ಲಿ ಸಿಎಎ ಪರವಾಗಿರುವ 15 ಮುಸ್ಲಿಂಯೇತರ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವುದಾಗಿ ಸಾರ್ವಜನಿಕವಾಗಿ ಹೇಳಿಕೊಂಡಿದ್ದರು. ಇದು ಸಿಸಿಎಸ್ ಕಂಡಕ್ಟ್ ರೂಲ್ಸ್ ಅಡಿಯಲ್ಲಿ ಕೋಮು ಭಾವನೆಯನ್ನು ಕೆರಳಿಸುವಂತಹ ಗಂಭೀರ ದುಷ್ಕೃತ್ಯವಾಗಿದೆ. ಹೀಗಾಗಿ ಅವರನ್ನು ಅಮಾನತು ಮಾಡಿ ವಿಚಾರಣೆಗೆ ಆದೇಶಿಸಲಾಗಿದೆ.
ಕಳೆದ ಡಿಸೆಂಬರ್ ತಿಂಗಳಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು ಸಿಎಎ ಮತ್ತು ಎನ್ಆರ್ಸಿ ವಿರೋಧಿ ಪ್ರತಿಭಟನೆಗಳ ಕೇಂದ್ರಬಿಂದುವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.