ಬೆಂಗಳೂರು: ಸಾರ್ವಜನಿಕವಾಗಿ ಸೀನುವ ಮೂಲಕ ವೈರಸ್ ಅನ್ನು ಹೆಚ್ಚು ಹೆಚ್ಚು ಹರಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ ಟೆಕ್ಕಿಯೊಬ್ಬನನ್ನು ಇನ್ಫೋಸಿಸ್ ಸಂಸ್ಥೆ ಉದ್ಯೋಗದಿಂದ ವಜಾಗೊಳಿಸಿದೆ.
ಈ ಪ್ರಕರಣದ ಬಗ್ಗೆ ಇನ್ಫೋಸಿಸ್ ಸಂಸ್ಥೆ ತನ್ನ ತನಿಖೆಯನ್ನು ಪೂರ್ಣಗೊಳಿಸಿದ್ದು, ಟೆಕ್ಕಿ ಹಾಕಿದ ಪೋಸ್ಟ್ ಸಂಸ್ಥೆಯ ನಡವಳಿಕೆಗೆ ಮತ್ತು ಅದರ ಸಾಮಾಜಿಕ ಜವಾಬ್ದಾರಿಗೆ ವಿರುದ್ಧವಾಗಿರುವುದು ಎಂದು ತಿಳಿದುಬಂದಿದೆ. ಹೀಗಾಗಿ ಆತನನ್ನು ಉದ್ಯೋಗದಿಂದ ವಜಾ ಮಾಡಲಾಗಿದೆ ಎಂದು ಇನ್ಫೋಸಿಸ್ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದೆ.
Infosys has completed its investigation on the social media post by one of its employees and we believe that this is not a case of mistaken identity. (1/2)
— Infosys (@Infosys) March 27, 2020
ಟೆಕ್ಕಿಯನ್ನು ಮುಜೀಬ್ ಮೊಹಮ್ಮದ್ ಎಂದು ಗುರುತಿಸಲಾಗಿದ್ದು, ಈತ ತನ್ನ ಟ್ವಿಟ್ಟರ್ ಖಾತೆಯಲ್ಲಿ “ಹೊರಗೆ ಹೋಗಿ ಸಾರ್ವಜನಿಕವಾಗಿ ಸೀನುವ ಮೂಲಕ ವೈರಸ್ಸನ್ನು ಹರಡೋಣ” ಎಂದು ಹೇಳಿದ್ದ. ಇದಕ್ಕೆ ಸಾರ್ವಜನಿಕರಿಂದ ತೀವ್ರವಾಗಿ ಆಕ್ರೋಶ ವ್ಯಕ್ತವಾಗಿದೆ. ಈತ ಇನ್ಫೋಸಿಸ್ ಸಂಸ್ಥೆಯಲ್ಲಿ ಹಿರಿಯ ಟೆಕ್ನಾಲಜಿ ಆರ್ಕಿಟೆಕ್ಟ್ ಆಗಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.
ಈತ ಕಳೆದ 25 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದಾನೆ ಎಂದು ತಿಳಿದುಬಂದಿದೆ. ಈತನ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ.
Mujeeb Mohammad, a Sr. Technology Architect with Infosys Technologies asked people to sneeze in public & spread the Virus. He has now been terminated by @Infosys
I just don’t understand what’s wrong with these urban educated psychos. Sick! #CoronaVillains #COVID2019 pic.twitter.com/LqwJhHm9Sh
— Deepika Narayan Bhardwaj (@DeepikaBhardwaj) March 27, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.