ಮಂಗಳೂರು: ಕೊರೋನವೈರಸ್ ಕಾರಣದಿಂದಾಗಿ ರಾಷ್ಟ್ರವ್ಯಾಪಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ, ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ರಾಮಕೃಷ್ಣ ಮಿಷನ್ ಸಹಯೋಗದೊಂದಿಗೆ ಜಾಗೃತಿ ಮೂಡಿಸಲು ನವೀನ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.
ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಪೊಲೀಸರು “ನಾನು ತಪ್ಪಿತಸ್ಥ. ನಾನು ಲಾಕ್ಡೌನ್ ಆದೇಶಗಳನ್ನು ಉಲ್ಲಂಘಿಸಿದ್ದೇನೆ” ಎಂಬ ಫಲಕವನ್ನು ಹಿಡಿಯುವ ಶಿಕ್ಷೆಯನ್ನು ನೀಡಲಾಗುತ್ತಿದೆ.
ಈ ಕುರಿತಂತೆ ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ಇದನ್ನೇ ಮತ್ತೆ ಪುನರಾವರ್ತಿಸದಿರಿ ಎಂದಿದ್ದಾರೆ.
We have started a unique campaign in conjunction with ramakrishna mission..creating awareness and appealing them not to repeat..#COVID19 #LOCKDOWN pic.twitter.com/XjgInz7kmM
— Harsha IPS CP Mangaluru City (@compolmlr) March 27, 2020
ಅನೇಕ ಜನರು ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಮತ್ತು ಬೀದಿಗಳಲ್ಲಿ ಸಂಚರಿಸುತ್ತಿರುವುದರಿಂದ ಪೊಲೀಸರು ಮತ್ತು ರಾಮಕೃಷ್ಣ ಮಿಷನ್ ಸದಸ್ಯರು ಜಂಟಿಯಾಗಿ ನಿಯಮಗಳನ್ನು ಉಲ್ಲಂಘನೆ ಮಾಡುವವರಿಗೆ ಇರಿಸುಮುರಿಸು ತರುವಂತಹ ಕಾರ್ಯವನ್ನು ಮಾಡುತ್ತಿದ್ದಾರೆ.
ಜನರು ರಸ್ತೆಗಿಳಿಯದಂತೆ ತಡೆಯುವ ಉಪಕ್ರಮ ಇದಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಹೇಳಿದ್ದಾರೆ.
ಅಲ್ಲದೆ, ಕೊರೋನವೈರಸ್ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಸಾಮಾಜಿಕ ಅಂತರ ಮತ್ತು ನೈರ್ಮಲ್ಯದ ಮಹತ್ವದ ಬಗ್ಗೆ ಜನರಿಗೆ ತಿಳಿಸಲು “ಟೀಮ್ ಎಗೇಂಸ್ಟ್ ಕೋವಿಡ್ -19” ಎಂಬ ಹೆಸರಿನ ವಾಟ್ಸಾಪ್ ಗುಂಪನ್ನು ಕೂಡ ರಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.