ನವದೆಹಲಿ: ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರೇಡಿಯೋ ಜಾಕಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಮಾರಣಾಂತಿಕ ವೈರಸ್ ವಿರುದ್ಧದ ಹೋರಾಟದಲ್ಲಿ ರೇಡಿಯೊದ ಮಹತ್ವವನ್ನು ಪ್ರತಿಪಾದಿಸಿದರು.
“ನಾವು ಸಕಾರಾತ್ಮಕತೆಯನ್ನು ಹೆಚ್ಚಿಸುವ ಮತ್ತು ಜನರಲ್ಲಿ ಆತಂಕವನ್ನು ಕಡಿಮೆ ಮಾಡುವ ಸಂದರ್ಭ ಇದಾಗಿದೆ. ರೇಡಿಯೋ ಇದನ್ನು ಮಾಡುವುದರ ಮೂಲಕ ದೊಡ್ಡ ವ್ಯತ್ಯಾಸವನ್ನು ತರಬಲ್ಲದು” ಎಂದು ಅವರು ತಮ್ಮ ಟ್ವಿಟ್ಟರ್ ಹ್ಯಾಂಡಲ್ನಲ್ಲಿ ತಿಳಿಸಿದ್ದಾರೆ.
ರೇಡಿಯೋ ಸಾಟಿಯಿಲ್ಲದ ವ್ಯಾಪ್ತಿಯನ್ನು ಹೊಂದಿದೆ ಮತ್ತು ಕೊರೋನವೈರಸ್ ವಿರುದ್ಧದ ಪರಿಸ್ಥಿತಿಯಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಮೋದಿ ಹೇಳಿದರು.
ಈ ಮೊದಲು, ಪ್ರಧಾನ ಮಂತ್ರಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ದೇಶದ ವಿವಿಧ ಭಾಗಗಳ ರೇಡಿಯೊ ಜಾಕಿಗಳೊಂದಿಗೆ ಸಂವಾದ ನಡೆಸಿದ್ದರು, ಅಲ್ಲಿ ಅವರು COVID-19 ಅನ್ನು ಎದುರಿಸಲು ವಿವಿಧ ರೀತಿಯಲ್ಲಿ ಜಾಗೃತಿ ಮೂಡಿಸುವಲ್ಲಿ ಆರ್ಜೆಗಳು ವಹಿಸಿದ ಪಾತ್ರವನ್ನು ಶ್ಲಾಘಿಸಿದರು.
Today I had an extensive interaction with Radio Jockeys from different parts of India. Radio has a major role to play in spreading awareness on ways to fight COVID-19. I shared some ideas on how the radio can do so and also heard their innovative ideas. https://t.co/zWV17FXpEu
— Narendra Modi (@narendramodi) March 27, 2020
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಾರ ಭಾರತದಲ್ಲಿ ಶನಿವಾರ ದೃಢಪಟ್ಟ ಕೊರೋನವೈರಸ್ ಪ್ರಕರಣಗಳ ಸಂಖ್ಯೆ 873 ಕ್ಕೆ ಏರಿದೆ.
ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 775 ಕ್ಕೆ ಏರಿಕೆಯಾಗಿದ್ದು, 78 ರೋಗಿಗಳನ್ನು ಗುಣಪಡಿಸಿ ಬಿಡುಗಡೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.