ಮುಂಬೈ: ಕೊರೋನವೈರಸ್ ವಿರುದ್ಧದ ಹೋರಾಟಕ್ಕೆ ಟಾಟಾ ಗ್ರೂಪ್ 500 ಕೋಟಿ ರೂಪಾಯಿಗಳನ್ನು ನೀಡಲು ಮುಂದಾಗಿದೆ. ಈ ಅನುದಾನವನ್ನು ವೈದ್ಯಕೀಯ ಸಿಬ್ಬಂದಿಗಳಿಗೆ ವೈಯಕ್ತಿಕ ರಕ್ಷಣಾ ಪರಿಕರಗಳನ್ನು ಒದಗಿಸಲು, ರೋಗಿಗಳ ಚಿಕಿತ್ಸೆಯ ವ್ಯವಸ್ಥೆಗೆ, ಪರೀಕ್ಷಾ ಕಿಟ್ಗಳಿಗೆ, ಸೋಂಕು ಪೀಡಿತ ರೋಗಿಗಳಿಗೆ ಚಿಕಿತ್ಸೆ ಸೌಲಭ್ಯವನ್ನು ಸ್ಥಾಪಿಸುವ ಸಲುವಾಗಿ, ವೈದ್ಯಕೀಯ ಕಾರ್ಮಿಕರಿಗೆ ತರಬೇತಿ ನೀಡುವ ಸಲುವಾಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಾಟಾ ಗ್ರೂಪ್ ಮುಖ್ಯಸ್ಥ ರತನ್ ಟಾಟಾ ಅವರು, “ಭಾರತ ಮತ್ತು ಜಗತ್ತಿನ ಪರಿಸ್ಥಿತಿ ನಿಜಕ್ಕೂ ಆತಂಕಕಾರಿಯಾಗಿದೆ, ತುರ್ತು ಸ್ಪಂದನೆಯ ಅಗತ್ಯವಿದೆ. ಈ ಹಿಂದೆಯೂ ಟಾಟಾ ಟ್ರಸ್ಟ್ ಮತ್ತು ಟಾಟಾ ಗ್ರೂಪ್ ಕಂಪನಿಗಳು ದೇಶದ ಅಗತ್ಯತೆಗಳಿಗೆ ಸ್ಪಂದಿಸಿದೆ. ಈ ಸಂದರ್ಭದಲ್ಲೂ ಹಿಂದೆಂದಿಗಿಂತಲೂ ಹೆಚ್ಚಿನ ಅಗತ್ಯ ದೇಶಕ್ಕಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ತುರ್ತು ಸಂಪನ್ಮೂಲಗಳನ್ನು ನಿಯೋಜಿಸುವುದು ವೈರಸ್ ವಿರುದ್ಧದ ಹೋರಾಟಕ್ಕೆ ಅತಿ ಮುಖ್ಯವಾಗಿದೆ” ಎಂದಿದ್ದಾರೆ.
The COVID 19 crisis is one of the toughest challenges we will face as a race. The Tata Trusts and the Tata group companies have in the past risen to the needs of the nation. At this moment, the need of the hour is greater than any other time. pic.twitter.com/y6jzHxUafM
— Ratan N. Tata (@RNTata2000) March 28, 2020
ಟಾಟಾ ಗ್ರೂಪ್, ಟಾಟಾ ಟ್ರಸ್ಟ್ ಮತ್ತು ಟಾಟಾ ಸನ್ಸ್ ಸ್ಥಳೀಯ ಮತ್ತು ಜಾಗತಿಕ ಪಾಲುದಾರಿಕೆ ಕೈಜೋಡಿಸಿ ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳಿಗೆ ಬೆಂಬಲವನ್ನು ನೀಡಿದೆ. ಬಡ ಮತ್ತು ಹಿಂದುಳಿದ ವರ್ಗಗಳನ್ನು ಕೂಡ ತಲುಪಲಿದೆ ಎಂದು ಟಾಟಾ ಸಂಸ್ಥೆ ಹೇಳಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.