ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಲಲಿತ್ ಮೋದಿ ವಿವಾದಕ್ಕೆ ಬಲಿಯಾಗಿದೆ. ಪ್ರತಿಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ವ್ಯಾಪಂ ಹಗರಣದ ಸಂಬಂಧ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದವು.
ಅಧಿವೇಶನ ಆರಂಭವಾಗುತ್ತಿದ್ದಂತೆ ಇತ್ತೀಚೆಗೆ ನಿಧನರಾದ ಮಧ್ಯಪ್ರದೇಶದ ಸಂಸದ ದಿಲೀಪ್ ಸಿಂಗ್ ಬಹೂರಿಯಾ ಹಾಗೂ 13 ಮಂದಿ ಮಾಜಿ ಸದಸ್ಯರಿಗೆ ಸಂತಾಪ ಸೂಚಿಸಲಾಯಿತು. ಸಂತಾಪ ಸೂಚಕ ನಿರ್ಣಯದ ಬಳಿಕ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕಲಾಪವನ್ನು ಮುಂದೂಡಿದರು.
ರಾಜ್ಯಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ನ ಆನಂದ್ ಶರ್ಮಾ ಅವರು, ಲಲಿತ್ ಮೋದಿ ವೀಸಾ ವಿವಾದ ಪ್ರಸ್ತಾಪಿಸಿ, ಪ್ರಧಾನಿ ನರೇಂದ್ರ ಮೋದಿ ಅವರು ಇದಕ್ಕೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು, ಸುಷ್ಮಾ ಸ್ವರಾಜ್ ರಾಜೀನಾಮೆಗೆ ಪಟ್ಟು ಹಿಡಿದರು. ಸಿಪಿಐ ಮತ್ತು ಸಮಾಜವಾದಿ ಪಕ್ಷಗಳೂ ಇದಕ್ಕೆ ಸಾಥ್ ನೀಡಿತು. ಕಳಂಕಿತರ ರಾಜೀನಾಮೆ ಪಡೆಯದ ವಿನಾ ಕಲಾಪ ನಡೆಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದವು. ಇದರಿಂದಾಗಿ ಕಲಾಪವನ್ನು ಬುಧವಾರಕ್ಕೆ ಮುಂದೂಡಬೇಕಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.