ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಮಾರ್ಚ್ 10 ರಂದು ನಡೆದಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕರ್ನಾಟಕದ ಓರ್ವ ವೃದ್ಧನೂ ಕೊರೊನಾದಿಂದ ಮೃತಪಟ್ಟಿದ್ದರು. ಈ ಕುರಿತಂತೆ ಇದೀಗ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅನೇಕ ಮಂದಿಗೆ ಸೋಂಕು ತಗುಲಿರುವುದಾಗಿ ತಿಳಿದು ಬಂದಿದೆ.
ಜನರು ದೇಶ ವಿದೇಶಗಳಿಂದ ಆಗಮಿಸಿ ಈ ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದು ,ಕರ್ನಾಟಕದಿಂದಲೂ ಸುಮಾರು 45 ಮಂದಿ ಭಾಗಿಗಳಾಗಿದ್ದ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಈಗಾಗಲೇ ಇದರಲ್ಲಿ ಭಾಗವಹಿಸಿದ 13 ಮಂದಿಯನ್ನು ಕ್ವಾರಂಟೈನ್ನಲ್ಲಿ ಇಡಲಾಗಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಇದರಲ್ಲಿ ಭಾಗವಹಿಸಿದ ಇನ್ನುಳಿದವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ಶ್ರೀ ರಾಮುಲು ತಿಳಿಸಿದ್ದಾರೆ.
ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಭಾಗವಹಿಸಿದ 26 ವ್ಯಕ್ತಿಗಳು ಬೀದರ್ ಜಿಲ್ಲೆಗೆ ಸೇರಿದವರಾಗಿದ್ದು, ಅವರನ್ನು ಈ ಕೂಡಲೇ quarantine ಮಾಡಲಾಗಿದೆ. ಉಳಿದವರ ಪತ್ತೆ ಹಚ್ಚುವ ಕಾರ್ಯವನ್ನು ಮುಂದುವರೆಸಲಾಗಿದೆ.
— B Sriramulu (@sriramulubjp) March 31, 2020
ಈಗಾಗಲೇ 13 ಜನರ ಪತ್ತೆ ಹಚ್ಚಿ ಅವರನ್ನು Quarantine ನಲ್ಲಿಡಲಾಗಿದೆ. #Covid19 ಸೋಂಕು ತಪಾಸಣೆಗಾಗಿ ಕಫ ಪರೀಕ್ಷೆ ನಡೆಸಿದ್ದು, ಈಗ Negative ಎಂದು ವರದಿ ಬಂದಿದೆ. ಇದು ಸಮಾಧಾನದ ಸಂಗತಿ. ಉಳಿದವರನ್ನು ಪತ್ತೆ ಹಚ್ಚಲಾಗುತ್ತಿದೆ.
— B Sriramulu (@sriramulubjp) March 31, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.