ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರು ಪಿಎಂ ಕೇರ್ಸ್ ನಿಧಿಗೆ 25 ಸಾವಿರ ರೂಪಾಯಿಗಳ ದೇಣಿಗೆ ನೀಡಿದ್ದಾರೆ.
ದೇಶವನ್ನು ಅಪಾಯಕ್ಕೆ ದೂಡಿರುವ ಮಹಾಮಾರಿ ಕೊರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟವನ್ನು ನಡೆಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪನೆ ಮಾಡಿದ್ದಾರೆ. ಈಗಾಗಲೇ ಇದಕ್ಕೆ ದೇಶದ ಮೂಲೆ ಮೂಲೆಯ ಜನರು ತಮ್ಮ ಕೈಲಾದಷ್ಟು ದೇಣಿಗೆಯನ್ನು ನೀಡುತ್ತಿದ್ದಾರೆ.
ಇದೀಗ ಗುಜರಾತಿನ ಗಾಂಧಿನಗರದಲ್ಲಿ ನೆಲೆಸಿರುವ ಪ್ರಧಾನಿಯವರ ತಾಯಿಯವರು ತಮ್ಮ ಉಳಿತಾಯವಾದ ರೂ.25000ಗಳನ್ನು ಪಿಎಂ ಕೇರ್ಸ್ ನಿಧಿಗೆ ದೇಣಿಗೆ ನೀಡಿದ್ದಾರೆ.
ಜನತಾ ಕರ್ಫ್ಯೂ ನಡೆದ ದಿನದಂದು ಸಂಜೆ 5 ಗಂಟೆಗೆ ಹೀರಾಬೆನ್ ಅವರು ಬಟ್ಟಲು ಹಿಡಿದು ಶಬ್ದ ಮಾಡುವ ಮೂಲಕ ಕೊರೋನಾ ಯೋಧರಿಗೆ ಗೌರವಗಳನ್ನು ಅರ್ಪಣೆ ಮಾಡಿದ್ದರು. ಈ ವಿಡಿಯೋ ಭಾರಿ ವೈರಲ್ ಆಗಿತ್ತು. ಮೋದಿಯವರು ಸ್ವತಃ ಈ ವಿಡಿಯೋವನ್ನು ಹಂಚಿಕೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.