ಬೆಂಗಳೂರು : ಕೊರೋನವೈರಸ್ ಹರಡುವುದನ್ನು ತಡೆಯಲು 21 ದಿನಗಳ ರಾಷ್ಟ್ರವ್ಯಾಪಿ ಲಾಕ್ ಡೌನ್ ಅಂತ್ಯವಾಗಲಿರುವ ಎಪ್ರಿಲ್ 14ರವರೆಗೆ ಕರ್ನಾಟಕ ಪೊಲೀಸರು ಎರಡು ಮತ್ತು ನಾಲ್ಕು ಚಕ್ರಗಳ ಬಳಕೆಯನ್ನು ನಿಷೇಧಿಸಿದ್ದಾರೆ.
ಈ ಲಾಕ್ಡೌನ್ ನಿರ್ದೇಶನವನ್ನು ನಿರ್ಲಕ್ಷಿಸುವವರ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದು ಕರ್ನಾಟಕ ಪೊಲೀಸರು ಎಚ್ಚರಿಸಿದ್ದಾರೆ.
ಕರ್ನಾಟಕ ಡಿಜಿಪಿ ಈ ಬಗ್ಗೆ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದು “ಇದು ಏಪ್ರಿಲ್ ಫೂಲ್ ತಮಾಷೆ ಅಲ್ಲ. ಎರಡು / ನಾಲ್ಕು ಚಕ್ರ ವಾಹನಗಳನ್ನು ಏಪ್ರಿಲ್ 14 ರವರೆಗೆ ನಿಷೇಧಿಸಲಾಗಿದೆ. ಲಾಕ್ಡೌನ್ ನಿರ್ದೇಶನವನ್ನು ನಿರ್ಲಕ್ಷಿಸಲು ನೀವು ಬಯಸಿದರೆ ನಾವು ನಿಮ್ಮ ವಾಹನವನ್ನು ವಶಪಡಿಸಿಕೊಳ್ಳಲಾಗುತದೆ” ಎಂದಿದ್ದಾರೆ.
This is not an April Fool’s prank. Two/ four wheelers are banned from use till the 14th of April. We will SEIZE your vehicle if you CEASE to ignore this lockdown regulation.
— DGP KARNATAKA (@DgpKarnataka) April 1, 2020
ಇಂದು, COVID-19 ಸಕಾರಾತ್ಮಕ ಪ್ರಕರಣಗಳು 105 ನ್ನು ದಾಟಿದೆ.
ಪ್ರಸ್ತುತ ರಾಜ್ಯಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾದ 90 ಜನರಲ್ಲಿ 88 ಜನರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದ್ದು, ಇಬ್ಬರು ನಿರ್ಣಾಯಕ ಘಟ್ಟದಲ್ಲಿ ಇದ್ದಾರೆ ಎನ್ನಲಾಗಿದೆ.
ಭಾರತದಲ್ಲಿ ಒಟ್ಟು ಕೊರೊನಾವೈರಸ್ ಧನಾತ್ಮಕ ಪ್ರಕರಣಗಳು ಮಂಗಳವಾರ 1,397 ಕ್ಕೆ ತಲುಪಿದ್ದು, ವಿದೇಶಿ ಪ್ರಜೆಗಳು ಸೇರಿದಂತೆ 1,238 ಸಕ್ರಿಯ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ಇದುವರೆಗೆ 35 ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಒಂಬತ್ತು, ಗುಜರಾತಿನಲ್ಲಿ ಆರು ಸಾವುಗಳು ವರದಿಯಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.