ಬೆಂಗಳೂರು: ಕರ್ನಾಟಕದಲ್ಲಿ ಕೊರೋನವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೆಂಗಳೂರು ಸಾಂಕ್ರಾಮಿಕ ರೋಗದ ಹಾಟ್ ಸ್ಪಾಟ್ ಆಗಿ ಪರಿವರ್ತನೆಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರವು ನಾಲ್ಕು ಜಿಲ್ಲೆಗಳನ್ನು ರೆಡ್ ಝೋನ್ ಆಗಿ ಘೋಷಣೆ ಮಾಡಿದೆ.
ಮೈಸೂರು, ಉತ್ತರ ಕನ್ನಡ, ಬೆಂಗಳೂರು, ದಕ್ಷಿಣಕನ್ನಡ ಮತ್ತು ಚಿಕ್ಕಬಳ್ಳಾಪುರ ರೆಡ್ ಝೋನ್ ಆಗಿ ಘೋಷಣೆ ಆಗಿವೆ.
ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಕೆಲವೊಂದು ಸುತ್ತಮುತ್ತಲಿನ ಗ್ರಾಮಗಳನ್ನು ಬಫರ್ ಝೋನ್ ಆಗಿ ಘೋಷಿಸಲಾಗಿದೆ.
ವೈರಸ್ ಪ್ರಕರಣಗಳು ಹೆಚ್ಚು ಕಂಡುಬಂದಿರುವ ಜಿಲ್ಲೆಗಳನ್ನು ರೆಡ್ ಝೋನ್ ಆಗಿ ಘೋಷಿಸಲಾಗಿದೆ. ಈ ಜಿಲ್ಲೆಗಳಿಗೆ ಹೆಚ್ಚಿನ ಗಮನವನ್ನು ನೀಡುವ ಸಲುವಾಗಿ ಈ ಘೋಷಣೆಯನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈಗಾಗಲೇ ಬೆಂಗಳೂರಿನಲ್ಲಿ ಕರೋನವೈರಸ್ ಪ್ರಕರಣಗಳು 45 ಅನ್ನು ಮೀರಿದೆ. ಮೈಸೂರಿನಲ್ಲಿ 14 ಪ್ರಕರಣಗಳು ದಾಖಲಾಗಿದೆ. ದಕ್ಷಿಣ ಕನ್ನಡದಲ್ಲಿ 8, ಚಿಕ್ಕಬಳ್ಳಾಪುರದಲ್ಲಿ 9 ಪ್ರಕರಣಗಳು ದಾಖಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.