ನವದೆಹಲಿ: ಕೊರೋನಾ ವೈರಸ್ ಮಹಾಮಾರಿಯ ವಿರುದ್ಧದ ಹೋರಾಟಕ್ಕೆ ಅಜೀಂ ಪ್ರೇಮ್ಜಿ ಫೌಂಡೇಶನ್ 1,125 ಕೋಟಿ ರೂಪಾಯಿಗಳನ್ನು ಸಮಗ್ರವಾಗಿ ದೇಣಿಗೆ ನೀಡಲು ಮುಂದಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅಜೀಂ ಪ್ರೇಮ್ಜಿ ಫೌಂಡೇಶನ್ ವಕ್ತಾರರು, “ಇಷ್ಟು ಭಯಾನಕ ಬಿಕ್ಕಟ್ಟನ್ನು ನಮ್ಮ ಆಧುನಿಕ ಜಾಗತಿಕ ಸಮಾಜ ಎದುರಿಸಿರಲಿಲ್ಲ. ಈ ಬಿಕ್ಕಟ್ಟಿನಿಂದ ಹೊರಬರಲು ಮತ್ತು ಇದರ ಮಾನವೀಯ ಪರಿಣಾಮಗಳನ್ನು ಕುಗ್ಗಿಸಲು ನಾವೆಲ್ಲರೂ ಒಟ್ಟಾಗಿ ಕಾರ್ಯ ಮಾಡಬೇಕಾಗಿದೆ” ಎಂದಿದ್ದಾರೆ.
ಫೌಂಡೇಶನ್ನ 1,600 ಸದಸ್ಯರ ತಂಡವು ನಾಗರಿಕ ಸಮಾಜದ 350 ಸದಸ್ಯರೊಂದಿಗೆ ಸರ್ಕಾರಿ ಸಂಸ್ಥೆಗಳ ಜೊತೆ ಕೈಜೋಡಿಸಿ ದೇಣಿಗೆಯನ್ನು ಉತ್ತಮ ಕಾರ್ಯಕ್ಕೆ ಬಳಸಿಕೊಳ್ಳುವ ನಿಟ್ಟಿನಲ್ಲಿ ಸಹಾಯ ಮಾಡಲಿದೆ ಎಂದಿದೆ.
ಈಗಾಗಲೇ ಹಲವಾರು ಸಂಘ-ಸಂಸ್ಥೆಗಳು ಮತ್ತು ಉದ್ಯಮಗಳು ಸಾಕಷ್ಟು ಪ್ರಮಾಣದಲ್ಲಿ ವೈರಸ್ ವಿರುದ್ಧದ ಹೋರಾಟಕ್ಕೆ ದೇಣಿಗೆಯನ್ನು ನೀಡಿವೆ. ಇದೀಗ ವಿಪ್ರೋ ಸಿಂಹಪಾಲನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.