ನವದೆಹಲಿ: COVID -19 ಸಾಂಕ್ರಾಮಿಕ ರೋಗದ ಪರಿಣಾಮವಾಗಿ ಪ್ರಸ್ತುತ ಉದ್ಭವಿಸಿರುವ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಬಡ್ತಿ ಮತ್ತು ಪ್ರವೇಶಕ್ಕಾಗಿ ನಿರ್ಣಾಯಕವಾಗಿರುವ 29 ಮುಖ್ಯ ವಿಷಯಗಳಿಗೆ ಮಾತ್ರ 10 ಮತ್ತು 12 ನೇ ತರಗತಿಯ ಪರೀಕ್ಷೆಗಳನ್ನು ನಡೆಸಲಿದೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಈ ನಿಟ್ಟಿನಲ್ಲಿ ಅವರು ಮಂಡಳಿಗೆ ಸಲಹೆಗಳನ್ನೂ ನೀಡಿದ್ದಾರೆ.
ಉಳಿದ ವಿಷಯಗಳಿಗೆ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಿಲ್ಲ ಮತ್ತು ವಿದ್ಯಾರ್ಥಿಗಳ ಅಂಕಗಳಿಗಾಗಿ ಇಂಟರ್ನಲ್ ಅಸೆಸ್ಮೆಂಟ್ ಅನ್ನು ಆಧಾರವಾಗಿಟ್ಟುಕೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
Please find the press release of CBSE regarding various classes promotion and board examinations.#IndiaFightsCorona pic.twitter.com/KyYAcQqYKW
— Dr Ramesh Pokhriyal Nishank (@DrRPNishank) April 1, 2020
COVID-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ತರಗತಿಗೆ ಒಂದರಿಂದ ಎಂಟನೇ ತರಗತಿಯ ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ಅವರು ಸಿಬಿಎಸ್ಇಗೆ ನಿರ್ದೇಶನ ನೀಡಿದ್ದಾರೆ. ಇದುವರೆಗಿನ ಪ್ರಾಜೆಕ್ಟ್, ತರಗತಿ ಪರೀಕ್ಷೆಗಳನ್ನು ಆಧರಿಸಿದ ಮೌಲ್ಯಮಾಪನಗಳ ಆಧಾರದ ಮೇಲೆ 9 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ಮಾಡಲಾಗುವುದು ಎಂದು ಸಚಿವರು ಹೇಳಿದರು.
9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳು ಈ ಬಾರಿ ಬಡ್ತಿ ಹೊಂದದ ವಿದ್ಯಾರ್ಥಿಗಳು ಆನ್ಲೈನ್ ಅಥವಾ ಆಫ್ಲೈನ್ನಲ್ಲಿ ಶಾಲಾ ಆಧಾರಿತ ಪರೀಕ್ಷೆಗಳನ್ನು ಬರೆಯಬಹುದಾಗಿದೆ.
📢 Announcement
In view of the current situation due to #COVID19, I have advised @cbseindia29 to promote ALL students studying in classes I-VIII to the next class/grade. #CoronavirusPandemic pic.twitter.com/zvklNiJ4Tj— Dr Ramesh Pokhriyal Nishank (@DrRPNishank) April 1, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.