
ನವದೆಹಲಿ: ಕೊರೋನವೈರಸ್ ಮಹಾಮಾರಿ ಸೃಷ್ಟಿಸಿರುವ ಆತಂಕಕ್ಕೆ ಸಂಬಂಧಿಸಿದಂತೆ ವಿಷಯಗಳನ್ನು ಚರ್ಚಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಈ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವಾರು ಕೇಂದ್ರ ಸಚಿವರುಗಳು ಕೂಡ ಭಾಗಿಯಾಗಿದ್ದರು.
ಕೊರೋನವೈರಸ್ ಸಾಂಕ್ರಾಮಿಕ ರೋಗವು ಈಗಾಗಲೇ ಭಾರತದಲ್ಲಿ 50 ಮಂದಿಯನ್ನು ಬಲಿತೆಗೆದುಕೊಂಡಿದೆ. ಸೋಂಕಿಗೆ ಒಳಗಾದವರ ಸಂಖ್ಯೆ 1965 ಅನ್ನು ದಾಟಿದೆ.
ವಿಡಿಯೋ ಕಾನ್ಫರೆನ್ಸ್ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿಗಳು ಸೋಂಕಿತರ ಸಂಪರ್ಕಗಳನ್ನು ಪತ್ತೆ ಹಚ್ಚುವ ಮತ್ತು ಶಂಕಿತರನ್ನು ಕ್ವಾರಂಟೈನ್ ಸೌಲಭ್ಯಕ್ಕೆ ಕಳುಹಿಸುವ ಬಗೆಗೆ ಚರ್ಚೆ ನಡೆಸಿದರು.
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಕಾರ್ಯಕ್ರಮದ ಬಳಿಕ ಭಾರತದಲ್ಲಿ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ ದಿಢೀರನೆ ಏರಿಕೆಯಾಗಿದೆ. ಇಲ್ಲಿ ಹಲವಾರು ಮಂದಿ ಸೋಂಕಿತರ ಸಂಪರ್ಕಕ್ಕೆ ಬಂದಿದ್ದರು ಎಂದು ಹೇಳಲಾಗಿದೆ. ಇದೀಗ ಅವರೆಲ್ಲರನ್ನು ಪತ್ತೆಹಚ್ಚಿ ಕ್ವಾರಂಟೈನ್ಗೆ ಒಳಪಡಿಸುವ ಪ್ರಕ್ರಿಯೆ ನಡೆಯುತ್ತಿದೆ.
ಕೊರೋನವೈರಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಗಳೊಂದಿಗೆ ನಡೆಸುತ್ತಿರುವ ಎರಡನೇ ವಿಡಿಯೋ ಕಾನ್ಫರೆನ್ಸ್ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


