
ನವದೆಹಲಿ: ಕೊರೋನಾವೈರಸ್ ಮಹಾಮಾರಿಯ ಹಿನ್ನೆಲೆಯಲ್ಲಿ ದೇಶವ್ಯಾಪಿ ಜಾರಿಗೊಳಿಸಲಾಗಿರುವ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಅವಿರತವಾಗಿ ಪರಿಶ್ರಮ ಪಡುತ್ತಿರುವ ಜನರಿಗೆ ಮತ್ತು ಆಡಳಿತಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘನೆಗಳನ್ನು ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಅವರು, ಕರೋನಾ ವಿರುದ್ಧದ ಹೋರಾಟದಲ್ಲಿ ದೇಶದ ಏಕತೆಯನ್ನು ಪ್ರತಿಬಿಂಬಿಸುವ ಸಲುವಾಗಿ ಏಪ್ರಿಲ್ 5 ರಂದು ರಾತ್ರಿ 900 ಗಂಟೆಗೆ ಐದು ನಿಮಿಷಗಳ ಕಾಲ ಎಲ್ಲಾ ವಿದ್ಯುದ್ದೀಪಗಳನ್ನು ಬಂದ್ ಮಾಡಿ, ದೀಪಗಳನ್ನು ಬೆಳಗಿಸುವಂತೆ ದೇಶದ ಜನತೆಗೆ ಕರೆ ನೀಡಿದ್ದಾರೆ.
ಕ್ಯಾಂಡಲ್, ಮೊಬೈಲ್ ಫ್ಲಾಶ್ ಲೈಟ್, ಹಣತೆಯನ್ನು ಉರಿಸುವಂತೆ ಅವರು ದೇಶದ ಜನರಿಗೆ ಕರೆ ನೀಡಿದ್ದಾರೆ.
ಅಂಧಕಾರವನ್ನು ಹೊಡೆದೋಡಿಸುವಲ್ಲಿ ಬೆಳಕಿನ ಶಕ್ತಿಯನ್ನು ತೋರಿಸುವ ನಿಟ್ಟಿನಲ್ಲಿ ಈ ಕಾರ್ಯ ಮಾಡುವಂತೆ ಅವರು ಸೂಚನೆ ನೀಡಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಪ್ರತಿಯೊಬ್ಬರು ತಮ್ಮ ಮನೆಯ ಬಾಲ್ಕನಿಯಲ್ಲೇ ಇರಬೇಕು, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
“130 ಕೋಟಿ ಭಾರತೀಯರು ದೀಪವನ್ನು ಬೆಳಗಿಸಿದ ಬೆಳಗಿನ ಶಕ್ತಿಯು ಗೋಚರಿಸುತ್ತದೆ, ಅದು ನಮ್ಮನ್ನು ಹೋರಾಡುವುದಕ್ಕೆ ಪ್ರೇರೇಪಿಸುತ್ತದೆ” ಎಂದಿದ್ದಾರೆ.
A video messsage to my fellow Indians. https://t.co/rcS97tTFrH
— Narendra Modi (@narendramodi) April 3, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


