ನವದೆಹಲಿ: ಪ್ರತಿಪಕ್ಷಗಳೆಲ್ಲ ಒಂದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ವಾಗ್ ಪ್ರಹಾರ ನಡೆಸುತ್ತಿವೆ, ಅಲ್ಲದೇ ಅವರು ರಾಜೀನಾಮೆ ನೀಡಿದರೆ ಮಾತ್ರ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುತ್ತೇವೆ ಎಂದು ಬೆದರಿಕೆ ಹಾಕಿವೆ. ಇದಕ್ಕೆ ಪ್ರತಿಯಾಗಿ ಸುಷ್ಮಾ ಕಾಂಗ್ರೆಸ್ ವಿರುದ್ಧ ಸಮರ ಸಾರಲು ಮುಂದಾಗಿದ್ದಾರೆ.
ಕಲ್ಲಿದ್ದಲು ಹಗರಣದಲ್ಲಿ ಆರೋಪಿಗಳಾಗಿರುವವರಿಗೆ ಪಾಸ್ಪೋರ್ಟ್ ನೀಡಲು ಸಹಕರಿಸುವಂತೆ ನನ್ನ ಮೇಲೆ ಹಿರಿಯ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದರು. ಅವರ ಹೆಸರನ್ನು ಅಧಿವೇಶನದಲ್ಲಿ ಬಹಿರಂಗಪಡಿಸುತ್ತೇನೆ ಎಂದು ಸುಷ್ಮಾ ಟ್ವಿಟ್ ಮಾಡಿದ್ದಾರೆ.
ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಸಂತೋಷ್ ಬಗ್ರೊಡಿಯಾ ಅವರಿಗೆ ಪಾಸ್ಪೋರ್ಟ್ ನೀಡುವಂತೆ ಕಾಂಗ್ರೆಸ್ ನಾಯಕರೊಬ್ಬರು ಒತ್ತಡ ಹೇರಿದ್ದರು ಎಂದು ಸುಷ್ಮಾ ಹೇಳಿಕೊಂಡಿದ್ದಾರೆ. ಇದು ಲಲಿತ್ ಮೋದಿ ವಿವಾದವನ್ನು ಹಿಡಿದು ಸಂಸತ್ತಿನಲ್ಲಿ ರಂಪಾಟ ನಡೆಸುತ್ತಿರುವ ಕಾಂಗ್ರೆಸ್ಗೆ ಬಿಸಿ ತುಪ್ಪವಾಗಿ ಪರಿಣಮಿಸುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.