ನವದೆಹಲಿ: ಕೊರೋನಾವೈರಸ್ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅತಿ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡ ಜಾಗತಿಕ ನಾಯಕನಾಗಿ ಹೊರಹೊಮ್ಮಿದ್ದಾರೆ.
ವಿಶ್ವದ ಪ್ರಜಾಪ್ರಭುತ್ವದ ನಾಯಕರ ನಡುವೆ ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ ಎಂದು ಲಂಡನ್ ಆಧಾರಿತ ‘ಫಿನಾನ್ಸಿಯಲ್ ಟೈಮ್ಸ್’ ಹೇಳಿದೆ.
ವರದಿಯ ಪ್ರಕಾರ, ಬ್ರಿಟಿಷ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರು ಈಗಾಗಲೇ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಐಸೋಲೇಷನ್ನಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೂ ಹೆಚ್ಚಿನ ಸಕಾರಾತ್ಮಕ ರೇಟಿಂಗ್ ಸಿಕ್ಕಿದೆ. ಮೋದಿಯವರು ಶೇಕಡಾ 63 ರಷ್ಟು ಸಕಾರಾತ್ಮಕ ರೇಟಿಂಗ್ಸ್ ಪಡೆದುಕೊಂಡಿದ್ದಾರೆ.
ಇನ್ನು, ಕೊರೋನವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಆಗದ ಕಾರಣದಿಂದಾಗಿ ಟೀಕೆಗೆ ಒಳಗಾಗುತ್ತಿರುವ ಅಮೆರಿಕ ಅಧ್ಯಕ್ ಡೋನಾಲ್ಡ್ ಟ್ರಂಪ್ ರವರ ಜನಪ್ರಿಯತೆ ಕೂಡ ತುಸು ಸುಧಾರಣೆ ಕಂಡಿದೆ.
ಮಾರ್ಚ್ 29 ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿ, ಲಾಕ್ ಡೌನ್ ಘೋಷಣೆ ಮಾಡಿದ್ದಕ್ಕಾಗಿ ದೇಶದ ಜನತೆಯಲ್ಲಿ ಕ್ಷಮೆ ಯಾಚನೆ ಮಾಡಿದ್ದರು. ಬೇರೆ ಬೇರೆ ದೇಶಗಳಲ್ಲಿ ಅದರಲ್ಲೂ ಚೀನಾದಂತಹ ಕಮ್ಯುನಿಸ್ಟ್ ರಾಷ್ಟ್ರಗಳಲ್ಲಿ ಒತ್ತಾಯಪೂರ್ವಕವಾಗಿ ಜನರನ್ನು ನಿಯಂತ್ರಿಸಲಾಗಿದೆ. ಆದರೆ ಭಾರತದಲ್ಲಿ ಪ್ರಧಾನಿಯವರು ಕೈಮುಗಿದು ದೇಶದ ಜನತೆಯಲ್ಲಿ ನಿರ್ಬಂಧವನ್ನು ಮಾಡಿಕೊಳ್ಳುವಂತೆ ಘೋಷಣೆ ಮಾಡಿದ್ದರು. ಇದು ಅವರ ಜನಪ್ರಿಯತೆಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.
ಮಾತ್ರವಲ್ಲದೆ ಕರೋನವೈರಸ್ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ದೇಶಗಳ ನಾಯಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆಯನ್ನೂ ನಡೆಸಿದ್ದರು. ವಿವಿಧ ದೇಶಗಳಲ್ಲಿರುವ ಭಾರತೀಯ ರಾಜತಾಂತ್ರಿಕರನ್ನು ಅವರು ಕೋವಿಡ್-19 ಮಿಷನ್ಗೆ ಅವರು ನಿಯೋಜನೆಗೊಳಿಸಿದ್ದರು.
ಕೊರೋನಾವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡ ಕ್ರಮಗಳನ್ನು ವಿಶ್ವಸಂಸ್ಥೆ ಸೇರಿದಂತೆ ಅನೇಕ ಅಂತರಾಷ್ಟ್ರೀಯ ನಾಯಕರುಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.