ನವದೆಹಲಿ: ವಿಶ್ವದ ಅತಿ ದೊಡ್ಡ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬಿಜೆಪಿ ಇಂದು ತನ್ನ 40ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಸದಸ್ಯರಿಗೆ ಮತ್ತು ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಶುಭಕಾಮನೆಗಳನ್ನು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, “ಪಕ್ಷವನ್ನು ಕಟ್ಟಲು ಶ್ರಮಿಸುತ್ತಿರುವ ನಾಯಕರಿಗೆ ಗೌರವಾರ್ಪಣೆಗಳು, ಅವರಿಂದಾಗಿ ಬಿಜೆಪಿ ಇಂದು ದೇಶದ ಉದ್ದ ಮತ್ತು ಅಗಲಕ್ಕೂ ಕೋಟ್ಯಂತರ ಭಾರತೀಯರಿಗೆ ಸೇವೆ ಸಲ್ಲಿಸುವ ಅವಕಾಶವನ್ನು ಪಡೆದುಕೊಂಡಿವೆ” ಎಂದಿದ್ದಾರೆ.
Greetings to all fellow @BJP4India Karyakartas on the Sthapana Diwas of the Party. Tributes to all those who have toiled hard to build the Party for decades, due to which BJP has got the opportunity to serve crores of Indians across our nation’s length and breadth. #BJPat40
— Narendra Modi (@narendramodi) April 6, 2020
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಕೂಡ ಸ್ಥಾಪನಾ ದಿವಸದ ಸಂದರ್ಭದಲ್ಲಿ ಬಿಜೆಪಿಯ ಕಾರ್ಯಕರ್ತರಿಗೆ ಮತ್ತು ನಾಯಕರಿಗೆ ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ. ಅವರ ಪರಿಶ್ರಮದಿಂದಾಗಿ ಬಿಜೆಪಿ ಇಂದು ವಿಶ್ವದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದ್ದಾರೆ.
माँ भारती को परम वैभव पर स्थापित करने के पुनीत विचार से जन्मी भारतीय जनता पार्टी को अपने परिश्रम से सींच कर विशाल वटवृक्ष के रूप में खड़ा करने वाले मनीषियों और करोड़ों समर्पित, निष्ठावान कार्यकर्ताओं को भाजपा के 40वें स्थापना दिवस के अवसर पर नमन एवं शुभकामनाएं। #BJPSthapnaDiwas pic.twitter.com/5Y5iaNrdve
— Jagat Prakash Nadda (@JPNadda) April 6, 2020
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ, ” ತನ್ನ ರಾಷ್ಟ್ರವಾದಿ ವಿಚಾರಧಾರೆ ಮತ್ತು ಸಿದ್ಧಾಂತಗಳಿಂದಾಗಿ ಬಿಜೆಪಿಯು ಸದಾ ರಾಷ್ಟ್ರ ಹಿತಕ್ಕಾಗಿ ತನ್ನ ಸರ್ವಸ್ವವನ್ನು ಅರ್ಪಣೆ ಮಾಡಿದೆ” ಎಂದಿದ್ದಾರೆ.
भारत के लोकतंत्र की सच्ची वाहक भारतीय जनता पार्टी के स्थापना दिवस की समस्त कार्यकर्ताओं व देशवासियों को हार्दिक शुभकामनाएँ।
अपनी राष्ट्रवादी विचारधारा और सिद्धांतों से भाजपा ने सदैव राष्ट्रहित के लिए अपना सर्वस्व अर्पण किया है। pic.twitter.com/Ngitb54jIQ
— Amit Shah (@AmitShah) April 6, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.