ನವದೆಹಲಿ : ಭಾರತೀಯ ಜನತಾ ಪಾರ್ಟಿಯ 40 ನೇ ಸಂಸ್ಥಾಪನಾ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಅಗತ್ಯ ಇರುವವರಿಗೆ ಸಹಾಯ ಮಾಡುವಂತೆ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಮತ್ತು ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಜಯಗಳಿಸುವಂತೆ ಮಾಡಲು ಮುಂದಾಗಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಕೊರೋನವೈರಸ್ ವಿರುದ್ಧದ ಹೋರಾಟ ದೀರ್ಘಾವಧಿಯದ್ದಾಗಿದೆ. ಆದರೆ ಈ ಹೋರಾಟದಲ್ಲಿ ಆಯಾಸಪಡಬಾರದು. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಯಾರೂ ಕೂಡ ಹಸಿವೆಯಿಂದ ಇರದಂತೆ ನೋಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡರು.
“ಭಾರತ ಕರೋನಾವೈರಸ್ ವಿರುದ್ಧ ಹೋರಾಟವನ್ನು ನಡೆಸುತ್ತಿರುವ ಸಂದರ್ಭದಲ್ಲಿ ನಾವು ನಮ್ಮ ಪಕ್ಷದ 40ನೇ ಸಂಸ್ಥಾಪನ ದಿನವನ್ನು ಆಚರಿಸುತ್ತಿದ್ದೇವೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು. ಸಾಮಾಜಿಕ ಅಂತರದ ಬಗ್ಗೆ ಅರಿವು ಮೂಡಿಸಬೇಕು, ಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕು” ಎಂದಿದ್ದಾರೆ.
“ಬಿಜೆಪಿಗೆ ಸೇವೆ ಮಾಡಲು ಅವಕಾಶ ಸಿಕ್ಕಿದಾಗಲೆಲ್ಲ ಅದು ಉತ್ತಮ ಆಡಳಿತ ಮತ್ತು ಬಡವರ ಸಬಲೀಕರಣಕ್ಕಾಗಿ ಗಮನ ಕೇಂದ್ರೀಕರಿಸಿದೆ. ಹಲವರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ಕಾರ್ಯಕರ್ತರು ಶ್ರಮಿಸಿದ್ದಾರೆ. ಶ್ರೇಷ್ಠ ಸಾಮಾಜಿಕ ಸೇವೆಯನ್ನು ಮಾಡಿದ್ದಾರೆ. ಭಾರತವು ಕರೋನಾ ವೈರಸ್ ಬಿಕ್ಕಟ್ಟನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ನಾವು ಪಕ್ಷದ ನಲವತ್ತನೇ ಸಂಸ್ಥಾಪನ ದಿನವನ್ನು ಆಚರಿಸುತ್ತಿದ್ದೇವೆ. ನಡ್ಡಾ ಅವರು ನೀಡಿರುವ ನಿರ್ದೇಶನಗಳನ್ನು ನಾವು ಪಾಲಿಸೋಣ. ಅಗತ್ಯ ಇರುವವರಿಗೆ ಸಹಾಯ ಮಾಡೋಣ, ಸಾಮಾಜಿಕ ಅಂತರದ ಪ್ರಾಮುಖ್ಯತೆಯನ್ನು ತಿಳಿಸೋಣ. ಭಾರತವನ್ನು ಕರೋನವೈರಸ್ ಮುಕ್ತವಾಗಿಸೋಣ” ಎಂದಿದ್ದಾರೆ.
ಸಾಂಕ್ರಾಮಿಕ ರೋಗವನ್ನು ಎದುರಿಸಲು ಭಾರತ ಕೈಗೊಂಡ ಪರಿಣಾಮಕಾರಿ ಕ್ರಮಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಕೂಡ ಪ್ರಶಂಸಿಸಿದೆ. ಭಾರತದ ಹೋರಾಟ ವಿಶ್ವಕ್ಕೆ ಹೊಸ ಉದಾಹರಣೆಯನ್ನು ನೀಡಿದೆ. ರೋಗದ ಗಂಭೀರತೆಯನ್ನು ಆರಂಭಿಕ ಹಂತದಲ್ಲಿ ಅರಿತು ಸಮಯ ಪೂರ್ವಕವಾಗಿ ಕ್ರಮಗಳನ್ನು ಜರುಗಿಸಿದ ದೇಶಗಳಲ್ಲಿ ಭಾರತವು ಒಂದು. ಭಾರತ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಕಷ್ಟು ಶ್ರಮಿಸಿದೆ” ಎಂದಿದ್ದಾರೆ.
” ಇಂದು ದೇಶದ ಗುರಿ ಒಂದೇ ಆಗಿದೆ, ಮಿಷನ್ ಒಂದೇ ಆಗಿದೆ ಮತ್ತು ನಿರ್ಣಯ ಕೂಡ ಒಂದೇ ಆಗಿದೆ-ಅದುವೇ ಕರೋನಾ ವಿರುದ್ಧದ ಹೋರಾಟದಲ್ಲಿ ವಿಜಯ ಸಾಧಿಸುವುದು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.