ನವದೆಹಲಿ: ಗರೀಬ್ ಕಲ್ಯಾಣ ಯೋಜನೆಯ ಪ್ರಯೋಜನಗಳು ಅರ್ಹ ಜನರಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವರುಗಳಿಗೆ ಸೂಚನೆ ನೀಡಿದ್ದಾರೆ.
ಅಲ್ಲದೆ, ಅತ್ಯಗತ್ಯ ಅವಧಿಗಳು ಮತ್ತು ರಕ್ಷಣಾ ಪರಿಕರಗಳ ಉತ್ಪಾದನೆಗಳು ಸಮರ್ಪಕವಾಗಿ ಸಮಯದ ಅವಶ್ಯಕತೆಗನುಗುಣವಾಗಿ ಉತ್ಪಾದನೆಯಾಗುತ್ತಿದೆ ಎಂಬುದನ್ನು ಸಚಿವರುಗಳು ಖಚಿತ ಪಡಿಸಿಕೊಳ್ಳಬೇಕು ಎಂದು ಮೋದಿ ಹೇಳಿದ್ದಾರೆ.
ಗರಿಬ್ ಕಲ್ಯಾಣ ಯೋಜನೆಯ ಅನುಷ್ಠಾನಗಳ ಬಗ್ಗೆ ಸಚಿವರುಗಳು ನಿರಂತರವಾಗಿ ಪರಿಶೀಲನೆಗಳನ್ನು ನಡೆಸಬೇಕು, ಅರ್ಹರಿಗೆ ಸಮರ್ಪಕವಾಗಿ ಯೋಜನೆಗಳು ತಲುಪುವಂತೆ ನಿಗಾ ವಹಿಸಬೇಕು ಎಂದು ಅವರು ಹೇಳಿದ್ದಾರೆ.
ಎದುರಾಗುತ್ತಿರುವ ಹೊಸ ಹೊಸ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಕ್ರಮಗಳ ವಿಸ್ತೃತವಾದ ವರದಿಯನ್ನು ಅಧಿಕಾರಿಗಳು ಸರ್ಕಾರಕ್ಕೆ ಒಪ್ಪಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.