ನವದೆಹಲಿ: ಕೊರೋನಾ ಸೋಂಕು ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಣಗಾಡುತ್ತಲೇ ಇವೆ. ಅನೇಕ ಕ್ರಮಗಳನ್ನೂ ಜಾರಿಗೆ ತಂದಿವೆ. ಡಿಜಿಟಲ್ ತಂತ್ರಜ್ಞಾನವನ್ನು ಬಳಕೆ ಮಾಡಿಯೂ ಜನರಿಗೆ ಕೋವಿಡ್-19 ಕುರಿತು ಎಚ್ಚರಿಕೆ ಕ್ರಮಗಳ ಮಾಹಿತಿ ನೀಡುವ ನಿಟ್ಟಿನಲ್ಲಿಯೂ ಕಾರ್ಯ ಪ್ರವೃತ್ತವಾಗಿದೆ. ಇಂತಹ ಒಂದು ಕೇಂದ್ರ ಸರ್ಕಾರದ ಜನಸ್ನೇಹಿ ಆ್ಯಪ್ ಆರೋಗ್ಯ ಸೇತು ಆಗಿದ್ದು, ಅದನ್ನು ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ಕೋವಿಡ್ ಕುರಿತ ಮಾಹಿತಿ ಪಡೆಯುವಂತೆ ಪ್ರಧಾನಿ ಮೋದಿ ದೇಶವಾಸಿಗಳಲ್ಲಿ ಮನವಿ ಮಾಡಿದ್ದಾರೆ.
ಕೇಂದ್ರದ ಈ ಆ್ಯಪ್ ಕೊರೋನಾ ಕುರಿತ ಮಹತ್ವದ ಮಾಹಿತಿಗಳನ್ನು ಜನರಿಗೆ ತಿಳಿಸುತ್ತದೆ. ಹೆಚ್ಚು ಜನರು ಈ ಮೊಬೈಲ್ ಆ್ಯಪ್ ಅನ್ನು ಬಳಕೆ ಮಾಡುವ ಮೂಲಕ ಇಂತಹ ತುರ್ತು ಪರಿಸ್ಥಿತಿಯಲ್ಲಿ ಹೇಗೆ ಕಾರ್ಯನಿರ್ವಹಿಸಬಹುದು ಎಂಬುದನ್ನು ಅರ್ಥೈಸಿಕೊಳ್ಳುವಂತೆಯೂ ಅವರು ತಿಳಿಸಿದ್ದಾರೆ.
ಎಐಆರ್ ವರದಿಗಳು, ಕೊರೋನಾ ಕುರಿತ ಮಾಹಿತಿಗಳನ್ನು ಈ ತಂತ್ರಜ್ಞಾನ ನೀಡುತ್ತದೆ. ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಇದನ್ನು ನಿರ್ಮಿಸಲಾಗಿದ್ದು, ಇದು ಕೊರೋನಾ ಬಗೆಗಿನ ಮಾಹಿತಿಯನ್ನು ಹೆಚ್ಚು ಜನರಿಗೆ ತಿಳಿಸಲು ಶಕ್ತವಾಗಿದೆ. ಇದನ್ನು ದೇಶದ ಎಲ್ಲಾ ಜನರು ಬಳಸುವಂತೆ ಮೋದಿ ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.