ನವದೆಹಲಿ: ಮಲೇರಿಯಾ ನಿಯಂತ್ರಣ ಔಷಧಿ ಹೈಡ್ರೋಕ್ಸಿಕ್ಲೊರೊಕ್ವಿನ್ ಅನ್ನು ಪೂರೈಕೆ ಮಾಡಿದ್ದಕ್ಕಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ.
ಹೈಡ್ರಾಕ್ಸಿಕ್ಲೋರೊಕ್ವಿನ್ ಔಷಧಿಯನ್ನು ಅನೇಕ ರಾಷ್ಟ್ರಗಳಲ್ಲಿ ರೋಗಿಗಳಿಗೆ ಚಿಕಿತ್ಸೆಗಾಗಿ ನೀಡಲಾಗುತ್ತಿದೆ. ಇದು ವೈರಸ್ ನಿಯಂತ್ರಣದಲ್ಲಿ ಹೆಚ್ಚು ಪರಿಣಾಮಕಾರಿ ಎಂದು ನಂಬಲಾಗಿದೆ. ಈ ಔಷಧಿಯನ್ನು ಉತ್ಪಾದನೆ ಮಾಡುವ ರಾಷ್ಟ್ರಗಳಲ್ಲಿ ಭಾರತ ನಂಬರ್ 1 ಆಗಿದೆ. ಹೀಗಾಗಿ ಅಮೆರಿಕ ಸೇರಿದಂತೆ ಅನೇಕ ರಾಷ್ಟ್ರಗಳು ಔಷಧಿಗಾಗಿ ಭಾರತಕ್ಕೆ ಮೊರೆ ಇಟ್ಟಿದೆ.
ಭಾರತವು ಈ ಔಷದದ ಮೇಲಿನ ರಫ್ತಿನ ನಿರ್ಬಂಧವನ್ನು ತೆರವುಗೊಳಿಸಿ ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳಿಗೆ ಇದನ್ನು ರಫ್ತು ಮಾಡಿದೆ. ಹೀಗಾಗಿ ಅಮೆರಿಕ ಅಧ್ಯಕ್ಷ ಭಾರತಕ್ಕೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಟ್ವೀಟ್ ಮಾಡಿರುವ ಟ್ರಂಪ್, “ಅಸಾಧಾರಣ ಸಮಯಗಳಿಗೆ ಸ್ನೇಹಿತರ ನಡುವಿನ ಸಹಕಾರದ ಅಗತ್ಯವಿರುತ್ತದೆ. ಹೈಡ್ರೋಕ್ಸಿಕ್ಲೊರೊಕ್ವಿನ್ ನಿರ್ಧಾರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಭಾರತದ ಜನರಿಗೆ ಧನ್ಯವಾದಗಳು. ನರೇಂದ್ರ ಮೋದಿಯವರಿಗೆ ಧನ್ಯವಾದ, ಅವರ ಬಲಿಷ್ಠ ನಾಯಕತ್ವ ಭಾರತ ಮಾತ್ರವಲ್ಲ ಮಾನವೀಯತೆಗೆ ಸಹಾಯ ಮಾಡುತ್ತಿದೆ” ಎಂದಿದ್ದಾರೆ.
Extraordinary times require even closer cooperation between friends. Thank you India and the Indian people for the decision on HCQ. Will not be forgotten! Thank you Prime Minister @NarendraModi for your strong leadership in helping not just India, but humanity, in this fight!
— Donald J. Trump (@realDonaldTrump) April 8, 2020
ಅಮೆರಿಕದಲ್ಲಿ ಇದುವರೆಗೆ ಕೊರೋನಾ ಸಾಂಕ್ರಾಮಿಕ ರೋಗಕ್ಕೆ 14800 ಮಂದಿ ಪ್ರಾಣ ತೆತ್ತಿದ್ದಾರೆ.
ಟ್ರಂಪ್ ಅವರ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, “ನಿಮ್ಮ ಮಾತಿಗೆ ನಾನು ಸಹಮತ ವ್ಯಕ್ತಪಡಿಸುತ್ತೇನೆ. ಭಾರತ ಮತ್ತು ಅಮೆರಿಕ ನಡುವಿನ ಬಾಂಧವ್ಯ ಹಿಂದೆಂದಿಗಿಂತಲೂ ಹೆಚ್ಚು ಗಟ್ಟಿಯಾಗಿದೆ. ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮಾನವೀಯತೆಗೆ ಎಷ್ಟು ಸಾಧ್ಯವೋ ಅಷ್ಟು ಸಹಾಯ ಮಾಡಲು ಭಾರತ ಸಿದ್ಧವಿದೆ. ಒಟ್ಟಾಗಿ ನಾವು ಜಯಗಳಿಸುತ್ತೇವೆ” ಎಂದಿದ್ದಾರೆ.
Fully agree with you President @realDonaldTrump. Times like these bring friends closer. The India-US partnership is stronger than ever.
India shall do everything possible to help humanity’s fight against COVID-19.
We shall win this together. https://t.co/0U2xsZNexE
— Narendra Modi (@narendramodi) April 9, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.