ನವದೆಹಲಿ: ರಾಷ್ಟ್ರವ್ಯಾಪಿಯಾಗಿ 21 ದಿನಗಳ ಲಾಕ್ ಡೌನ್ ಬಳಿಕ ಭಾರತೀಯ ರೈಲ್ವೆಯು ಎಪ್ರಿಲ್ 15 ರಿಂದ ತನ್ನ ಸೇವೆಗಳನ್ನು ಪುನರಾರಂಭಿಸಲಿದೆ ಎಂಬ ಮಾಧ್ಯಮಗಳ ವರದಿಯನ್ನು ಭಾರತೀಯ ರೈಲ್ವೆ ತಳ್ಳಿಹಾಕಿದೆ. ಈ ಬಗ್ಗೆ ಯಾವುದೇ ನಿರ್ದೇಶನಗಳು ಬಂದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.
ರೈಲ್ವೆ ಸಚಿವಾಲಯವು ಪುನರಾರಂಭಿಸುವ ಬಗ್ಗೆ ಯಾವುದೇ ನಿರ್ದೇಶನವನ್ನು ನೀಡಿಲ್ಲ ಎಂದು ಹೇಳಿಕೆಯಲ್ಲಿ ಭಾರತೀಯ ರೈಲ್ವೆ ತಿಳಿಸಿದೆ.
ಈ ಹಂತದಲ್ಲಿ ರೈಲ್ವೆ ಸೇವೆ ಪುನರಾರಂಭ ನಡೆಯುತ್ತದೆಯೋ ಅಥವಾ ಇಲ್ಲವೇ ಎಂಬುದನ್ನು ಹೇಳುವುದು ಸಾಧ್ಯವಾಗುವುದಿಲ್ಲ ಎಂದು ಅದು ಹೇಳಿದೆ.
” ಪ್ರಯಾಣಿಕರು ಸೇರಿದಂತೆ ಎಲ್ಲಾ ಪಾಲುದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೆಯು ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಯಾರು ಕೂಡ ತಪ್ಪು ವರದಿಗಳಿಗೆ ಅಥವಾ ವದಂತಿಗಳಿಗೆ ಕಿವಿಗೊಡಬಾರದು” ಎಂದಿದೆ.
ನಿರ್ದೇಶನ ಬಂದ ಕೂಡಲೇ ಅಥವಾ ನಿರ್ಧಾರ ಅಂತಿಮಗೊಂಡ ಕೂಡಲೇ ಸ್ವತಃ ರೈಲ್ವೆ ಈ ಬಗ್ಗೆ ಎಲ್ಲರಿಗೂ ಮಾಹಿತಿಯನ್ನು ನೀಡಲಿದೆ ಎಂದಿದೆ.
ಏಪ್ರಿಲ್ 14 ರ ಬಳಿಕ ಭಾರತೀಯ ರೈಲ್ವೆಯು ತನ್ನ ಸೇವೆಯನ್ನು ಆರಂಭಿಸಲಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿರುವ ಹಿನ್ನೆಲೆಯಲ್ಲಿ ರೈಲ್ವೆ ಈ ಸ್ಪಷ್ಟನೆಯನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.