ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪ್ರಮುಖ ಆದ್ಯತೆಗಳಲ್ಲಿ ಕಾಶ್ಮೀರವು ಕೂಡಿರುತ್ತದೆ ಎಂಬ ಚೀನಾದ ಹೇಳಿಕೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಚೀನಾದ ಹೇಳಿಕೆಯನ್ನೂ ಅಲ್ಲಗಳೆದಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಜಮ್ಮು ಮತ್ತು ಕಾಶ್ಮೀರ ಭಾರತದ ಆಂತರಿಕ ವಿಷಯ ಎಂಬುದನ್ನು ಪುನರುಚ್ಚರಿಸಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ತನ್ನ ಖಾಯಂ ಮಿಷನ್ ವೆಬ್ಸೈಟ್ನಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ವಿಶ್ವಸಂಸ್ಥೆಯಲ್ಲಿ ಚೀನಾದ ಖಾಯಂ ಮಿಷನ್ ವಕ್ತಾರರು ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಮಾಡಿದ ಉಲ್ಲೇಖವನ್ನು ನಾವು ತಿರಸ್ಕರಿಸುತ್ತೇವೆ” ಎಂದಿದ್ದಾರೆ.
“ವಿಷಯದ ಬಗ್ಗೆ ಭಾರತದ ಸ್ಥಿರತೆಯ ಬಗ್ಗೆ ಚೀನಾಗೆ ಚೆನ್ನಾಗಿ ಅರಿವಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದೆ. ಇದಕ್ಕೆ ಸಂಬಂಧಿಸಿದ ವಿಷಯಗಳು ಭಾರತದ ಆಂತರಿಕ ವಿಷಯವಾಗಿದೆ” ಎಂದಿದೆ.
“ಚೀನಾವು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಭಾರತದ ಜನರ ಮೇಲೆ ತೀವ್ರ ಸ್ವರೂಪದಲ್ಲಿ ಪರಿಣಾಮ ಬೀರುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆಯನ್ನು ಖಂಡಿಸಬೇಕು ಮತ್ತು ಉಲ್ಲೇಖಿಸಬೇಕು” ಎಂದು ಭಾರತ ಚೀನಾಗೆ ಕಿವಿಮಾತು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.