
ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಅವರು ‘ಭಾರತ್ ಪಡೇ ಆನ್ಲೈನ್’ ಅಭಿಯಾನವನ್ನು ಆರಂಭಿಸಿದ್ದಾರೆ. ಭಾರತದ ಆನ್ಲೈನ್ ಶಿಕ್ಷಣ ಪರಿಸರ ವ್ಯವಸ್ಥೆಯನ್ನು ಸುಧಾರಿಸುವ ಸಲುವಾಗಿ ಹೊಸ ಹೊಸ ಐಡಿಯಾಗಳನ್ನು ಪಡೆಯುವ ನಿರ್ದಿಷ್ಟ ಕಾರಣದೊಂದಿಗೆ ಅಭಿಯಾನವನ್ನು ಆರಂಭಿಸಲಾಗಿದೆ.
ಕೊರೋನಾವೈರಸ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ದೇಶವ್ಯಾಪಿಯಾಗಿ ಲಾಕ್ ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಹಲವು ಶಾಲೆಗಳು ಮತ್ತು ಕಾಲೇಜುಗಳು ಶಿಕ್ಷಣದ ಕಾರಣಕ್ಕಾಗಿ ಆನ್ಲೈನ್ ಮೊರೆ ಹೋಗಿವೆ.
ಈ ಅಭಿಯಾನದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವರು, “ಆನ್ಲೈನ್ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ದೇಶದಾದ್ಯಂತದಿಂದ ಅತ್ಯುತ್ತಮ ಸಲಹೆ ಮತ್ತು ಸೂಚನೆಗಳನ್ನು ಆಹ್ವಾನಿಸುವ ಸಲುವಾಗಿ ಈ ಅಭಿಯಾನವನ್ನು ಆರಂಭಿಸಲಾಗಿದೆ” ಎಂದಿದ್ದಾರೆ.
ಐಡಿಯಾಗಳನ್ನು ಜನರು bharatpadheonline.mhrd@gmail.com ಮತ್ತು ಟ್ವಿಟರ್ ಮೂಲಕ #BharatPadheOnline ಹ್ಯಾಶ್ಟ್ಯಾಗ್ ಬಳಸಿ ಹಂಚಿಕೊಳ್ಳಬಹುದಾಗಿದೆ ಎಂದು ಸಚಿವರು ಹೇಳಿದ್ದಾರೆ.
ಈ ವೇದಿಕೆ ಮೂಲಕ ದೇಶದಾದ್ಯಂತ ಶಿಕ್ಷಣ ತಜ್ಞರು ಮತ್ತು ಶಿಕ್ಷಕರು ತಮ್ಮ ಜ್ಞಾನ ಮತ್ತು ಅನುಭವಗಳನ್ನು ಹಂಚಿಕೊಳ್ಳಬಹುದಾಗಿದೆ. ಇದು ಈ ಸಂದರ್ಭದ ಅತ್ಯಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರತಿಯೊಬ್ಬರೂ ಕೂಡ ಈ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ದೇಶದ ಆನ್ಲೈನ್ ಶಿಕ್ಷಣ ವ್ಯವಸ್ಥೆಯನ್ನು ಸುಧಾರಣೆ ಗೊಳಿಸುವಲ್ಲಿ ಕೈಜೋಡಿಸಬೇಕು ಎಂದು ಪೋಖ್ರಿಯಾಲ್ ಕರೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


