ನವದೆಹಲಿ: ಗಡಿಯಲ್ಲಿ ಶತ್ರುಗಳ ವಿರುದ್ಧ ಹೋರಾಡಿ ವೀರ ಮರಣವನ್ನಪ್ಪುವ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಸಂಸತ್ತು ಅಧಿವೇಶನದ ಒಂದು ದಿನವನ್ನು ಮೀಸಲಿಡಲು ಲೋಕಸಭೆ ನಿರ್ಧರಿಸಿದೆ.
ಕರ್ತವ್ಯ ನಿರ್ವಹಿಸುವ ವೇಳೆ ಹತರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಮರ್ಪಿಸುವಂತೆ ರಕ್ಷಣಾ ಸಚಿವಾಲಯ ಮನವಿಯನ್ನು ಸಲ್ಲಿಸಿತ್ತು. ಈ ಹಿನ್ನಲೆಯಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಒಂದು ದಿನವನ್ನು ಹುತಾತ್ಮ ಯೋಧರ ಶ್ರದ್ಧಾಂಜಲಿಗೆ ಮೀಸಲಿಡುವ ನಿರ್ಧಾರ ಕೈಗೊಂಡಿದ್ದಾರೆ.
ಮೃತರಾದ ಮಾಜಿ ಅಥವಾ ಹಾಲಿ ಸಂಸತ್ತು ಸದಸ್ಯರಿಗೆ, ಭಯೋತ್ಪಾದನ ಕೃತ್ಯ, ಪ್ರಾಕೃತಿಕ ವಿಪತ್ತು ಅಥವಾ ಅಪಘಾತದಲ್ಲಿ ಮೃತರಾದವರಿಗೆ ಅಧಿವೇಶನದ ವೇಳೆ ಶ್ರದ್ಧಾಂಜಲಿಗಳನ್ನು ಅರ್ಪಿಸುವ ಪದ್ಧತಿ ಸಂಸತ್ತಿನಲ್ಲಿ ಇದೆ.
ಇದೀಗ ಯೋಧರಿಗೂ ಶ್ರದ್ಧಾಂಜಲಿ ಸಲ್ಲಿಸುವ ನಿರ್ಧಾರ ಮಾಡಲಾಗಿದ್ದು, ಇದಕ್ಕೆ ಎಲ್ಲಾ ಪಕ್ಷಗಳೂ ಸಮ್ಮತಿ ಸೂಚಿಸಿವೆ. ಗೃಹ ಸಚಿವಾಲಯ ಈ ಬಗ್ಗೆ ಅಂತಿಮ ಘೋಷಣೆ ಮಾಡಲಿದೆ.
ಹುತಾತ್ಮ ಯೋಧರ ತ್ಯಾಗವನ್ನು ಸ್ಮರಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಮಹತ್ವದ ನಿರ್ಧಾರ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.