ಬೆಂಗಳೂರು: ದೇಶವೇ ಕೊರೋನಾ ನಿಯಂತ್ರಣಕ್ಕಾಗಿ ಕಂಪ್ಲೀಟ್ ಲಾಕ್ಡೌನ್ ಆಗಿದೆ. ಸೋಷಿಯಲ್ ಡಿಸ್ಟೆನ್ಸ್ ಅಥವಾ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ಹರಡದಂತೆಯೂ ಹಲವಾರು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಕರ್ನಾಟಕದಲ್ಲಿಯೂ ಈ ನಿಯಮಗಳು ಜಾರಿಯಲ್ಲಿವೆ.
ಇನ್ನು ರಾಜ್ಯ ರಾಜಧಾನಿಯಲ್ಲಿ ಲಾಕ್ಡೌನ್ ಸಂದರ್ಭದಲ್ಲಿ ಕೊರೋನಾ ನಿಯಂತ್ರಣ ಆದೇಶಗಳನ್ನು ಜನರು ಎಷ್ಟರ ಮಟ್ಟಿಗೆ ಪಾಲನೆ ಮಾಡುತ್ತಿದ್ದಾರೆ ಎಂದು ಪರಿಶೀಲನೆ ನಡೆಸುವ ಸಲುವಾಗಿ ಸ್ವತಃ ಸಿಎಂ ಯಡಿಯೂರಪ್ಪ ಅವರೇ ಬೆಂಗಳೂರಿನಲ್ಲಿ ರೌಂಡ್ಸ್ ಹಾಕಿದ್ದಾರೆ. ಆ ಮೂಲಕ ಲಾಕ್ಡೌನ್ ಯಶಸ್ಸಿಗೆ ಸಾರ್ವಜನಿಕರ ರೆಸ್ಪಾನ್ಸ್ ಹೇಗಿದೆ ಎಂದು ತಿಳಿದುಕೊಳ್ಳುವ ನಿಟ್ಟಿನಲ್ಲಿಯೂ ಪ್ರಯತ್ನಿಸಿದ್ದಾರೆ.
ಈ ಸಂದರ್ಭ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಾರ್ವಜನಿಕರು, ಹೂ, ಹಣ್ಣುಗಳನ್ನು ಮಾರಾಟ ಮಾಡುವವರಿಂದಲೂ ಲಾಕ್ಡೌನ್ ಎಫೆಕ್ಟ್ಸ್ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಜನರಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಾದ ಅಗತ್ಯತೆ ಮತ್ತು ಅನಿವಾರ್ಯತೆಯ ಬಗ್ಗೆಯೂ ಅರಿವು ಮೂಡಿಸಿದ್ದಾರೆ. ಕೋವಿಡ್-19 ಹರಡಿಸಿಕೊಳ್ಳದಂತೆ ಮತ್ತು ಹರಡದಂತೆಯೂ ಸಾರ್ವಜನಿಕರಿಗೆ ಕಿವಿಮಾತು ಹೇಳಿದ್ದಾರೆ.
ಕೊರೋನಾದಿಂದ ಮುಕ್ತಿ ಪಡೆಯಲು ಎಪ್ರಿಲ್ 30 ರ ವರೆಗೆ ಲಾಕ್ಡೌನ್ ಮುಂದೂಡಲಾಗಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸಾಧ್ಯವಿರುವ ಕೆಲಸಗಳಿಗಷ್ಟೇ ಇದರಿಂದ ವಿನಾಯಿತಿ ನೀಡುವ ಬಗ್ಗೆಯೂ ಈ ಹಿಂದೆ ಸರ್ಕಾರ ನಿರ್ಧರಿಸಿದ್ದೂ, ಆ ಮೂಲಕ ಕೊರೋನಾ ಮುಷ್ಟಿಯಿಂದ ರಾಜ್ಯವನ್ನು ರಕ್ಷಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.