ನವದೆಹಲಿ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಮಾದರಿಗಳನ್ನು ಪರೀಕ್ಷಿಸಬಲ್ಲಂತಹ ದೇಶದಾದ್ಯಂತದ ಪ್ರಯೋಗಾಲಯಗಳನ್ನು ಹುಡುಕಲು ಪ್ರಾರಂಭಿಸಿದೆ.
ಖಾಸಗಿ ಮತ್ತು ಸರಕಾರಿ ಪ್ರಯೋಗಾಲಯಗಳನ್ನು ಬಳಸಿ ಕೊರೋನವೈರಸ್ ಪರೀಕ್ಷೆಗಳನ್ನು ಹೆಚ್ಚೆಚ್ಚು ನಡೆಸುವ ಯೋಜನೆ ಅದರದ್ದಾಗಿದೆ.
ಈ ಉದ್ದೇಶಕ್ಕಾಗಿ ದೇಶಾದ್ಯಂತ ಖಾಸಗಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಂದ ಅರ್ಜಿಗಳನ್ನು ಕೋರಲಾಗಿದೆ.
ಏಮ್ಸ್ ಸೇರಿದಂತೆ ದೇಶದ 14 ಸಂಸ್ಥೆಗಳಿಗೆ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾನಮಾನವನ್ನು ನೀಡಿ, ಅದರ ನಿರ್ದೇಶಕರ ಮೇಲ್ವಿಚಾರಣೆಗೆ ಒಂದು ತಂಡವನ್ನು ರಚಿಸಲಾಗಿದೆ. ದೇಶದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷೆ ಸೇರಿದಂತೆ ಎಲ್ಲಾ ಪ್ರಕರಣಗಳು ಅವರ ಮೇಲ್ವಿಚಾರಣೆಯಲ್ಲಿರುತ್ತವೆ. ಪ್ರತಿಯೊಬ್ಬರಿಗೂ ಕೆಲವೊಂದು ಜವಾಬ್ದಾರಿಯನ್ನು ವಹಿಸಲಾಗಿದೆ.
ಐಸಿಎಂಆರ್ ಭಾನುವಾರ ರಾತ್ರಿ 9:00 ರವರೆಗೆ 1,95,748 ಮಾದರಿಗಳನ್ನು ದೇಶದಾದ್ಯಂತದ ಲ್ಯಾಬ್ಗಳಲ್ಲಿ ಪರೀಕ್ಷಿಸಿದೆ.
ಇಂದು 15,583 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರಲ್ಲಿ 544 ಧನಾತ್ಮಕವಾಗಿದೆ.
ಈ ನಡುವೇ, COVID-19 ಕೇವಲ ನಾಲ್ಕು ದಿನಗಳಲ್ಲಿ ಕನಿಷ್ಠ 80 ಜಿಲ್ಲೆಗಳಿಗೆ ಹರಡಿತು ಎಂದು ವರದಿಯಾಗಿದೆ. ಈಗ ದೇಶದ 364 ಜಿಲ್ಲೆಗಳಲ್ಲಿ ಕರೋನವೈರಸ್ ಸೋಂಕಿನ ಪ್ರಕರಣಗಳಿವೆ.
ಕಳೆದ 24 ಗಂಟೆಗಳಲ್ಲಿ 909 ಹೊಸ ಪ್ರಕರಣಗಳು ಮತ್ತು ಕನಿಷ್ಠ 34 ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈವರೆಗೆ ಒಟ್ಟು 764 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಈ ಪೈಕಿ 74 ಮಂದಿ ಕಳೆದ 24 ಗಂಟೆಗಳಲ್ಲಿ ಚೇತರಿಸಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.