ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬೆಳಗ್ಗೆ 10 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಲಾಕ್ ಡೌನ್ ವಿಸ್ತರಣೆಯ ಬಗ್ಗೆ ಮಹತ್ವದ ಘೋಷಣೆಯನ್ನು ಮಾಡುವ ನಿರೀಕ್ಷೆ ಇದೆ.
ಈಗಾಗಲೇ ರಾಷ್ಟ್ರವ್ಯಾಪಿ ಅನುಷ್ಠಾನಗೊಳಿಸಲಾದ 21 ದಿನಗಳ ಲಾಕ್ ಡೌನ್ ಏಪ್ರಿಲ್ 14 ಅಂದರೆ ನಾಳೆಗೆ ಅಂತ್ಯವಾಗಲಿದೆ. ಈಗಾಗಲೇ ದೇಶದ ಹಲವಾರು ರಾಜ್ಯಗಳು ಲಾಕ್ ಡೌನ್ ಅನ್ನು ವಿಸ್ತರಣೆ ಮಾಡುವ ಬಗ್ಗೆ ಒಲವನ್ನು ವ್ಯಕ್ತಪಡಿಸಿವೆ. ಕೆಲವೊಂದು ರಾಜ್ಯಗಳು ಈಗಾಗಲೇ ಬಗ್ಗೆ ಅಧಿಕೃತ ಪ್ರಕಟಣೆಯನ್ನು ಹೊರಡಿಸಿದೆ.
ಇದೀಗ ನಾಳೆ ಭಾಷಣ ಮಾಡಲಿರುವ ಪ್ರಧಾನಿ ಮೋದಿ, ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೆ ಎಂಬ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ.
ಮೂಲಗಳ ಪ್ರಕಾರ, ಮೋದಿಯವರು ಲಾಕ್ ಡೌನ್ ಅನ್ನು ವಿಸ್ತರಣೆ ಮಾಡುವುದು ಬಹುತೇಕ ಖಚಿತ. ಆದರೆ ದೇಶದ ಆರ್ಥಿಕ ಹಿತದೃಷ್ಟಿಯಿಂದ ಕೆಲವೊಂದು ವಿನಾಯತಿಗಳನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.
ಇನ್ನೊಂದೆಡೆ ದೇಶದಲ್ಲಿ ಕೊರೋನಾವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಈಗಾಗಲೇ ಹತ್ತು ಸಾವಿರದ ಗಡಿಯನ್ನು ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ಲಾಕ್ಡೌನ್ ಅನ್ನು ವಿಸ್ತರಣೆ ಮಾಡುವುದು ಅನಿವಾರ್ಯ ಎನಿಸಿಕೊಂಡಿದೆ.
ಏಪ್ರಿಲ್ 14 ರ ಮಧ್ಯರಾತ್ರಿಯಿಂದ ಎರಡನೇ ಹಂತದ ಲಾಕ್ ಡೌನ್ ರಾಷ್ಟ್ರವ್ಯಾಪಿಯಾಗಿ ಜಾರಿಗೆ ಬರುವ ಸಾಧ್ಯತೆಯನ್ನು ಬಹುತೇಕರು ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಬೆಳಗ್ಗೆ 10 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡುವುದಾಗಿ ಪಿಎಂಒ ಕಚೇರಿ ಟ್ವೀಟ್ ಮಾಡಿದೆ.
Prime Minister @narendramodi will address the nation at 10 AM on 14th April 2020.
— PMO India (@PMOIndia) April 13, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.