ಮಂಗಳೂರು: ಕೊರೋನಾ ಸೋಂಕಿತರ ಸಂಖ್ಯೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೆಚ್ಚುತ್ತಲೇ ಇದೆ. ಆದರೆ ದಕ್ಷಿಣ ಕನ್ನಡದಲ್ಲಿ ಮಾತ್ರ ಕಳೆದ 9 ದಿನಗಳಿಂದ ಒಂದೇ ಒಂದು ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿಲ್ಲ. ಈ ವರೆಗೆ ಕೊರೋನಾ ಪಾಸಿಟಿವ್ ಇದ್ದು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 12 ಜನರ ಪೈಕಿ 8 ಜನ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದರೆ, ಇನ್ನು ಕೇವಲ 4 ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಡೆಯುತ್ತಿರುವುದಾಗಿ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.
ದುಬೈನಿಂದ ಆಗಮಿಸಿ ಕ್ವಾರಂಟೈನ್ನಲ್ಲಿದ್ದ 34 ವರ್ಷದ ವ್ಯಕ್ತಿಯ ಗಂಟಲ ದ್ರವ ಪರೀಕ್ಷಿಸಿ ಕೊರೋನಾ ನೆಗೆಟಿವ್ ಬಂದ ಹಿನ್ನೆಲೇಯಲ್ಲಿ ಆತನನ್ನು ನಿನ್ನೆಯಷ್ಟೇ ಡಿಸ್ಚಾರ್ಜ್ ಮಾಡಲಾಗಿದ್ದು ಆ ಮೂಲಕ 10 ತಿಂಗಳ ಹಸುಗೂಸು ಸೇರಿದಂತೆ ಈವರೆಗೆ 8 ಮಂದಿ ಗುಣಮುಖರಾಗಿ ಮನೆಯ ಹಾದಿ ಹಿಡಿದಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ, ಮಂಗಳೂರು ಸಿಟಿ ಕಾರ್ಪೊರೇಶನ್ನ ಮಲ್ಟಿ ಪರ್ಪಸ್ ವರ್ಕಸ್, ಆಶಾ ಕಾರ್ಯಕರ್ತರ ಸಹಕಾರದಿಂದ ಕೋವಿಡ್ -19 ವಿರುದ್ಧ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಅವರು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಮೂಲಕ ಜಿಲ್ಲಾಡಳಿತದ ಜೊತೆಗೆ ಕೈ ಜೋಡಿಸಿದ್ದು, ಆ ಕಾರಣದಿಂದ ಯಶಸ್ವಿಯಾಗಿ ಕೋವಿಡ್ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಮನೆ ಮನೆಗೆ ತೆರಳಿ ಅಗತ್ಯ ಮಾಹಿತಿಗಳನ್ನು, ಸಂಚಾರ ಹಿನ್ನೆಲೆ, 60 ವರ್ಷಕ್ಕೂ ಮೇಲ್ಪಟ್ಟವರ ಬಗ್ಗೆ ಮತ್ತು ಅನಾರೋಗ್ಯದಿಃದ ಬಳಲುತ್ತಿರುವ ಜನರ ಬಗ್ಗೆ ಎಂಸಿಸಿ ವರ್ಕರ್ಸ್ ಮತ್ತು ಆಶಾ ಕಾರ್ಯಕರ್ತೆಯರು ಮಾಹಿತಿ ಸಂಗ್ರಹಿಸಿದ್ದಾಗಿ ಮಾಹಿತಿ ನೀಡಿದ್ದಾರೆ.
ಈ ಕುರಿತಾದಂತೆ ಅಧಿಕಾರಿಗಳ ಜೊತೆಗೂ ಸಭೆ ನಡೆಸಿರುವ ಜಿಲ್ಲಾಧಿಕಾರಿ, ಜನರಲ್ಲಿ ಕೊರೋನಾ ಜಾಗೃತಿ ಮೂಡಿಸುವಂತೆಯೂ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.