ನವದೆಹಲಿ: ಆಹಾರ, ಔಷಧ ಸೇರಿದಂತೆ ಅಗತ್ಯ ವಸ್ತುಗಳ ದಾಸ್ತಾನಿದ್ದು ಜನರು ಭೀತಿ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಟ್ವಿಟ್ಟರ್ ಮೂಲಕ ಈ ವಿಷಯವನ್ನು ದೇಶವಾಸಿಗಳಿಗೆ ತಿಳಿಸಿರುವ ಶಾ, ದೇಶದಲ್ಲಿ ಅಗತ್ಯ ವಸ್ತುಗಳು ಸಾಕಷ್ಟಿದೆ. ಆ ವಿಚಾರದಲ್ಲಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಅಲ್ಲದೆ ಶ್ರೀಮಂತ ವರ್ಗದವರು ಬಡ ಜನರಿಗೆ ನೆರವಿನ ಹಸ್ತ ಚಾಚುವ ಮೂಲಕ ಕೊರೋನಾ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವಂತೆ ಮನವಿ ಮಾಡಿದ್ದಾರೆ.
ಇನ್ನು ತಮ್ಮ ಜೀವವನ್ನೇ ಪಣಕ್ಕಿಟ್ಟು ದೇಶದ ಜನರ ಆರೋಗ್ಯದ ಕಾಳಜಿ ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಪೊಲೀಸರು ಸೇರಿದಂತೆ ಇನ್ನಿತರ ಸೇವಾ ಕಾರ್ಯಕರ್ತರ ಸೇವೆಯನ್ನು ಸ್ಮರಿಸಿದ್ದಾರೆ. ಅವರು ನೀಡುವ ಆದೇಶಗಳನ್ನು ಪಾಲನೆ ಮಾಡುವ ಮೂಲಕ ಕೊರೋನಾ ಸೋಂಕು ಹರಡದಂತೆ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸೂಚಿಸಿದ್ದಾರೆ.
ಇನ್ನು ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಎಲ್ಲಾ ರಾಜ್ಯ ಸರ್ಕಾರಗಳ ಕ್ರಮಗಳನ್ನೂ ಶಾ ಕೊಂಡಾಡಿದ್ದಾರೆ. ಕೇಂದ್ರ ಸರ್ಕಾರದ ಆದೇಶಗಳ ಜೊತೆಗೆ ರಾಜ್ಯಗಳೂ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಲಾಕ್ಡೌನ್ ಸರಿಯಾಗಿ ಪಾಲನೆಯಾಗುವಂತೆ ಮಾಡುತ್ತಿದ್ದು, ಜನರೂ ಇದಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.
देश के गृह मंत्री के नाते मैं जनता को पुनः आश्वस्त करता हूँ कि देश में अन्न, दवाई व अन्य रोजमर्रा की चीज़ों का प्रयाप्त भण्डार है, इसलिए किसी भी नागरिक को परेशान होने की आवश्यकता नहीं है। साथ ही संपन्न लोगों से निवेदन करता हूँ कि आप आगे आकर आसपास रहने वाले गरीबों की सहायता करें।
— Amit Shah (@AmitShah) April 14, 2020
इस लड़ाई में महत्वपूर्ण भूमिका निभा रहे हमारे डॉक्टर, स्वास्थ्यकर्मी, सफाई कर्मचारी, पुलिसबल व सभी सुरक्षाकर्मियों का योगदान दिल को छू लेने वाला है। इस विषम परिस्थिति में आपका यह साहस और समझदारी हर भारतवासी को प्रेरित करती है। सभी लोग दिशानिर्देशों का पालन कर इनका सहयोग करें।
— Amit Shah (@AmitShah) April 14, 2020
सभी प्रदेश सरकारें जिस प्रकार केंद्र सरकार के साथ मिलकर कार्य कर रहीं हैं वह सचमुच प्रशंसनीय है। अब हमें इस समन्वय को और अधिक प्रगाढ़ करना है जिससे सभी नागरिक लॉकडाउन का अच्छे से पालन करें और किसी भी नागरिक को जरुरत की चीज़ों की समस्या भी ना हो।
— Amit Shah (@AmitShah) April 14, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.