ಬೆಂಗಳೂರು: ಕರ್ನಾಟಕ ಸರ್ಕಾರ ಮತ್ತು ಶ್ರೀ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ನಡುವೆ ರಾಜ್ಯದ 9 ಜಿಲ್ಲೆಗಳಿಗೆ ಸಂಬಂಧಿಸಿದಂತೆ ನೀರಿನ ಮಟ್ಟದ ಸುಧಾರಣೆ, ಪುನರುಜ್ಜೀವನ ಮತ್ತು ಅಂತರ್ಜಲದ ಮಟ್ಟವನ್ನು ಹೆಚ್ಚಿಸುವ ಕುರಿತಂತೆ ಒಪ್ಪಂದವೊಂದನ್ನು ಮಾಡಿಕೊಳ್ಳಲಾಗಿದೆ.
ರಾಜ್ಯದ ರೂರಲ್ ಡೆವಲಪ್ಮೆಂಟ್ ಆಂಡ್ ಪಂಚಾಯತ್ ರಾಜ್ ಇಲಾಖೆಯ ಸಚಿವ ಈಶ್ವರಪ್ಪ ಅವರು ಆರ್ಟ್ ಆಫ್ ಲಿವಿಂಗ್ನ ರವಿಶಂಕರ ಗುರೂಜಿ ಅವರೊಂದಿಗೆ ಈ ಬಗ್ಗೆ ಈಗಾಗಲೇ ಮಾತುಕತೆಯನ್ನು ಮುಗಿಸಿದ್ದು, ಮಹಾತ್ಮಾ ಗಾಂಧಿ ರೂರಲ್ ಎಂಪ್ಲಾಯ್ಮೆಂಟ್ ಗ್ಯಾರಂಟಿ ಆ್ಯಕ್ಟ್ನ ಅಡಿಯಲ್ಲಿ ಈ ಪ್ರಾಜೆಕ್ಟ್ಗೆ ಬೇಕಾದ ಹಣವನ್ನು ನೀಡುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಚಿತ್ರದುರ್ಗ, ಬಳ್ಳಾರಿ, ಕೋಲಾರ, ಯಾದಗಿರಿ, ಕೊಡಗು, ತುಮಕೂರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಈ ಯೋಜನೆಯನ್ನು ಕಾರ್ಯ ರೂಪಕ್ಕೆ ತರಲಾಗಿದೆ. ಚೆಕ್ ಡ್ಯಾಂ ನಿರ್ಮಾಣ, ಕಂಟೋರ್ಸ್ಗಳ ನಿರ್ಮಾಣ ಸೇರಿದಂತೆ ಇನ್ನಿತರ ಕೆಲಸಗಳನ್ನು ಈ ಯೋಜನೆಯಲ್ಲಿ ಮಾಡುವುದಾಗಿ ಸಚಿವರು ತಿಳಿಸಿದ್ದಾರೆ.
ಬರಪೀಡಿತವಾಗಿದ್ದ ಮಹಾರಾಷ್ಟ್ರದಲ್ಲಿ 40 ನದಿಗಳನ್ನು ಅಭಿವೃದ್ಧಿ ಮಾಡಲಾಗಿದೆ. ಅಲ್ಲದೆ ಅಂತರ್ಜಲ ವೃದ್ಧಿಗೂ ಪೂರಕವಾಗಿ ಕೆಲಸಗಳನ್ನು ಮಾಡಲಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದ ನೀರಿನ ಮೂಲಗಳನ್ನು ಅಭಿವೃದ್ಧಿ ಮಾಡಿ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಈ ಪ್ರಯತ್ನ ಮಾಡಲಾಗುತ್ತಿದೆ. ಆರ್ಟ್ ಆಫ್ ಲಿವಿಂಗ್ನ ನೀರಿನ ತಜ್ಞರ ಸಲಹೆಯಂತೆ ಇದನ್ನು ಕಾರ್ಯ ರೂಪಕ್ಕೆ ತರಲಾಗುತ್ತದೆ. ಆ ಮೂಲಕ ನೀರಿನ ಮೂಲಗಳನ್ನು ಸಮರ್ಥವಾಗಿ ಬಳಕೆಗೆ ಯೋಗ್ಯವಾಗುವಂತೆ ಮಾಡಲಾಗುತ್ತದೆ ಎಂದು ಈಶ್ವರಪ್ಪ ಅಭಿಪ್ರಾಯ ಪಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.