ನವದೆಹಲಿ: ಸಣ್ಣ ಕೈಗಾರಿಕೆಗಳು, ಎಂಎಸ್ಎಂಇ, ಬಡವರು, ರೈತರಿಗೆ ಸಹಾಯವಾಗುವಂತಹ, ದ್ರವ್ಯ ಕ್ರೋಢೀಕರಣ ಕ್ರಮ ಮತ್ತು ಸುಧಾರಿತ ಸಾಲ ಸೌಲಭ್ಯ ಮೊದಲಾದ ವಿಚಾರದಲ್ಲಿ RBI ತೆಗೆದುಕೊಂಡ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಅಲ್ಲದೆ WMA ಮಿತಿಗಳನ್ನು ಹೆಚ್ಚಿಸುವ ಮೂಲಕ ದೇಶದ ಎಲ್ಲಾ ರಾಜ್ಯಗಳಿಗೂ RBI ನ ಇಂತಹ ವ್ಯವಸ್ಥೆ ಸಹಕಾರಿಯಾಗಲಿದೆ ಎಂದು ಮೋದಿ ಅವರು ತಮ್ಮ ಟ್ವಿಟ್ಟರ್ ಮುಖೇನ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Today’s announcements by @RBI will greatly enhance liquidity and improve credit supply. These steps would help our small businesses, MSMEs, farmers and the poor. It will also help all states by increasing WMA limits.
— Narendra Modi (@narendramodi) April 17, 2020
ಭಾರತೀಯ ರಿಸರ್ವ್ ಬ್ಯಾಂಕ್ ಇಂದು ರೆಪೋ ದರವನ್ನು ಕಡಿತಗೊಳಿಸಿದೆ ಮತ್ತು 50,000 ಕೋಟಿ ರೂ. ಗಳ ರಿ-ಫೈನಾನ್ಸ್ ವಿಂಡೋ ಸೇರಿದಂತೆ ಈನ್ನಿತರ ಜನಸ್ನೇಹಿ ಕ್ರಮಗಳನ್ನು ಜಾರಿಗೊಳಿಸಿದೆ. ಆ ಮೂಲಕ ಕೋವಿಡ್-19 ಅನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿದೆ. ಅಲ್ಲದೆ ಅವ್ಯಾಹತವಾಗಿ ಹರಡುತ್ತಿರುವ ಕೊರೋನಾ ಸೋಂಕಿನಂತಹ ಕಠಿಣ ಸಂದರ್ಭದಲ್ಲಿ, ಅದನ್ನು ಎದುರಿಸುವುದಕ್ಕೆ ಬೇಕಾದ ಸಹಾಯವನ್ನು RBI ಮಾಡುತ್ತದೆ. ಭವಿಷ್ಯದ ಆರ್ಥಿಕತೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಸಕ್ತ ಸನ್ನಿವೇಶ ಸಂದರ್ಭಗಳಿಗೆ ಅನುಸಾರವಾಗಿ ಸಂಸ್ಥೆ ಪೂರಕ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
ದೇಶವನ್ನು ಆರ್ಥಿಕವಾಗಿ ಸಬಲಗೊಳಿಸುವ ನಿಟ್ಟಿನಲ್ಲಿ ಉತ್ಪಾದನಾ ಕ್ಷೇತ್ರದಲ್ಲಿ ಹೂಡಿಕೆ ಮತ್ತು ಸಾಲವನ್ನು ನೀಡಲು ಹೆಚ್ಚುವರಿ ಹಣ ಬಳಕೆ ಮಾಡಲಾಗುವುದು. ಆರ್ಥಿಕ ಮಟ್ಟವನ್ನು ಸುಸ್ಥಿತಿಯಲ್ಲಿ ಇಡಲು ರೆಪೋ ದರವನ್ನು ಕಡಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆ ಮೂಲಕ ಬಡ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಸಂಸ್ಥೆ ಕಾರ್ಯ ನಿರ್ವಹಿಸಲಿದೆ ಎಂದೂ ಶಕ್ತಿಕಾಂತ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.