ಬೆಂಗಳೂರು: ಕೊರೋನಾ ಟೆಸ್ಟ್ ನಡೆಸುತ್ತಿರುವ ಖಾಸಗಿ ಪ್ರಯೋಗಾಲಯಗಳು, ಪರೀಕ್ಷಾ ವೆಚ್ಚವಾಗಿ 2,250 ರೂ. ಗಳನ್ನು ನಿಗದಿ ಮಾಡುವಂತೆ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಆದೇಶ ನೀಡಿದೆ.
ಕೇಂದ್ರ ಸರಕಾರ ನಿಗದಿಗೊಳಿಸಿರುವ ಅವಶ್ಯಕತೆಗಳು ಮತ್ತು ಪ್ರೊಟೋಕಾಲ್ಗಳನ್ನು ಅನುಸರಿಸಿ, ರಾಜ್ಯದ ಖಾಸಗಿ ಪ್ರಯೋಗಾಲಯಗಳು ಕೋವಿಡ್-19 ಅನ್ನು ಪರೀಕ್ಷೆ ಮಾಡಬಹುದಾಗಿದೆ ಎಂದು ಇಲಾಖೆ ತಿಳಿಸಿದೆ.
ಈ ಬಗ್ಗೆ ಮಾತನಾಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಖಾಸಗಿ ಪ್ರಯೋಗಾಲಯಗಳಿಗೆ ಕೊರೋನಾ ಟೆಸ್ಟ್ ನಡೆಸಲು ಅವಶ್ಯಕತೆ ಇರುವ ಸೌಲಭ್ಯಗಳನ್ನು ದೊರಕಿಸಿಕೊಡಬೇಕಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರದ ಐಸಿಎಂಆರ್ ವತಿಯಿಂದ ಈಗಾಗಲೇ ರಾಜ್ಯದ 16 ಲ್ಯಾಬ್ ಗಳಿಗೆ ಕೋವಿಡ್-19 ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ಇದರಲ್ಲಿ 11 ಸರ್ಕಾರಿ ಲ್ಯಾಬ್ ಗಳಿದ್ದರೆ 5 ಖಾಸಗಿ ಲ್ಯಾಬ್ ಗಳಾಗಿವೆ ಎಂದು ಅಖ್ತರ್ ಮಾಹಿತಿ ನೀಡಿದ್ದಾರೆ.
ಇನ್ನು ರಾಜ್ಯದಲ್ಲಿ ಈ ವರೆಗೆ 359 ಕೊರೋನಾ ಪ್ರಕರಣಗಳು ದಾಖಲಾಗಿದ್ದು, 89 ಮಂದಿ ಗುಣಮುಖರಾಗಿದ್ದಾರೆ. 13 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.