ಆಂಧ್ರ ಪ್ರದೇಶ : ರಾಜ್ಯದ ವೈದ್ಯರು ದಿನದಲ್ಲಿ 5,508 ಕೊರೋನಾ ಪರೀಕ್ಷೆಗಳನ್ನು ನಡೆಸುವ ಮೂಲಕ ದೇಶದಲ್ಲಿ ಕೋವಿಡ್-19 ಪರೀಕ್ಷೆಯನ್ನು ಅತೀ ಹೆಚ್ಚು ನಡೆಸುವ ರಾಜ್ಯಗಳ ಪೈಕಿ ಎರಡನೇಯ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ವೈ. ಎಸ್. ಜಗನ್ಮೋಹನ ರೆಡ್ಡಿ ಮಾಹಿತಿ ನೀಡಿದ್ದಾರೆ.
ಕೊರೋನಾ ನಿಯಂತ್ರಣ ಪರೀಕ್ಷೆಗೆ ಕುರಿತಂತೆ ನಡೆಸಿದ ಸಭೆಯಲ್ಲಿ ಮುಖ್ಯಮಂತ್ರಿ ಈ ಮಾಹಿತಿ ನೀಡಿದ್ದಾರೆ. ಅಲ್ಲದೆ ಸೋಂಕು ತಡೆಯುವ ನಿಟ್ಟಿನಲ್ಲಿ ಆರೋಗ್ಯ ರಕ್ಷಕರಾದ ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು, ಪೊಲೀಸರು, ಸಂಬಂಧಿಸಿದ ಇಲಾಖೆಗಳಿಗೆ ತುರ್ತು ಕ್ರಮಗಳನ್ನು ಅನುಸರಿಸುವಂತೆಯೂ ಆದೇಶ ನೀಡಿದ್ದಾರೆ.
ಜೊತೆಗೆ ಆಸ್ಪತ್ರೆಗಳು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಚಿತ್ವ ಕಾಪಾಡುವಂತೆಯೂ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಅಲ್ಲದೆ ಆರೋಗ್ಯ ರಕ್ಷಣೆಯಲ್ಲಿ ತೊಡಗಿದ ಎಲ್ಲಾ ಕ್ಷೇತ್ರದ ನೌಕರರನ್ನೂ ಈ ಸಂದರ್ಭ ಅವರು ಶ್ಲಾಘಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಕ್ಷಿಪ್ರ ಪರೀಕ್ಷಾ ಕಿಟ್ಗಳನ್ನು ಬಳಸದೆಯೂ ಅಧಿಕಾರಿಗಳು ಕೊರೋನಾ ಪರೀಕ್ಷೆಗಳನ್ನು ಸಮರ್ಥವಾಗಿ ನಡೆಸುತ್ತಿದ್ದಾರೆ. ಮುಂದಿನ 10 ದಿನಗಳಲ್ಲಿ, ದಿನಕ್ಕೆ 17, 500 ಕ್ಕೂ ಹೆಚ್ಚು ಕೊರೋನಾ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಕೊರೋನಾ ಹಾಟ್ಸ್ಪಾಟ್ಗಳಾದ ಕರ್ನೂಲ್, ಗುಂಟೂರು, ನೆಲ್ಲೂರು ಮೊದವಾದ ಪ್ರದೇಶಗಳಲ್ಲಿ ಅತೀ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.