ಬೆಂಗಳೂರು: ಪಾದರಾಯನಪುರದ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದ ಶಂಕಿತರನ್ನು ಕ್ವಾರಂಟೈನ್ಗೆ ಒಳಪಡಿಸಲು ತೆರಳಿದ್ದ ಪೊಲೀಸರು ಮತ್ತು ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಯನ್ನು ಖಂಡಿಸಿರುವ ಡಿಸಿಎಂ ಅಶ್ವತ್ಥ್ ನಾರಾಯಣ್, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರಗಿಸುವುದಾಗಿ ತಿಳಿಸಿದ್ದಾರೆ.
ಕೋವಿಡ್-19 ವಿರುದ್ಧದ ಹೋರಾಟ ಎಲ್ಲರ ಕರ್ತವ್ಯ. ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿರುವ ಆರೋಗ್ಯ ಸಿಬ್ಬಂದಿ ಮತ್ತು ಪೊಲೀಸರ ಮೇಲಿನ ದೌರ್ಜನ್ಯ ಖಂಡನೀಯ. ಈ ಕೃತ್ಯ ಎಸಗಿದವರ ವಿರುದ್ಧ ಕಠಿಣ, ನಿರ್ದಾಕ್ಷಿಣ್ಯವಾಗಿ ಕ್ರಮವನ್ನು ಸರ್ಕಾರ ತೆಗೆದುಕೊಳ್ಳಲಿದೆ. ಸರ್ಕಾರದ ನಿಯಮಗಳನ್ನು ಪಾಲಿಸುವುದು ನಾಗರಿಕರ ಕರ್ತವ್ಯವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಅಲ್ಲದೆ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದ್ದು, ಕಾನೂನು ರೀತಿಯ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪೊಲೀಸರಿಗೂ ತಿಳಿಸಿದ್ದಾರೆ.
ಇನ್ನು ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದ ಶಂಕಿತರನ್ನು ತಪಾಸಣೆ ನಡೆಸಿ, ಕ್ವಾರಂಟೈನ್ಗೆ ಒಳಪಡಿಸಲು ಆರೋಗ್ಯ ಸಿಬ್ಬಂದಿ ಮತ್ತು ಪೊಲೀಸರು ಪಾದರಾಯನಪುರಕ್ಕೆ ಭಾನುವಾರ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 54 ಜನರನ್ನು ಈಗಾಗಲೇ ಕಸ್ಟಡಿಗೆ ತೆಗೆದುಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಪಾದರಾಯನಪುರದಲ್ಲಿ ಪೊಲೀಸ್ ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಅತ್ಯಂತ ಖಂಡನೀಯ. #COVID19 ವಿರುದ್ಧದ ಹೋರಾಟ ಪ್ರತಿಯೊಬ್ಬರ ಹೋರಾಟ.
ಈ ಕೃತ್ಯ ಎಸಗಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ. ಸರ್ಕಾರದ ನಿಯಮಗಳನ್ನು ಪಾಲಿಸುವುದು ನಾಗರಿಕ ಜವಾಬ್ದಾರಿಯಾಗಿದೆ.@bsybjp @BSBommai @DgpKarnataka
— Dr. Ashwathnarayan C. N. (@drashwathcn) April 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.