ನವದೆಹಲಿ: ಆಮ್ ಆದ್ಮಿ ಪಕ್ಷ ಮತ್ತು ದೆಹಲಿ ಪೊಲೀಸರ ನಡುವಣ ತಿಕ್ಕಾಟ ಮತ್ತಷ್ಟು ಉಲ್ಬಣಗೊಂಡಿದೆ. ನಮ್ಮ ನಾಯಕ ದಿಲೀಪ್ ಪಾಂಡೆಯನ್ನು ಹತ್ಯೆ ಮಾಡಲು ಪೊಲೀಸರು ಪ್ರಯತ್ನಿಸಿದ್ದಾರೆ ಎಂದು ಎಎಪಿ ಗಂಭೀರ ಆರೋಪ ಮಾಡಿದೆ.
ಪೊಲೀಸರು ತಮ್ಮ ಬಸ್ಸನ್ನು ನನ್ನ ಮೇಲೆ ಹತ್ತಿಸಲು ಪ್ರಯತ್ನಿಸಿದ್ದಾರೆ ಎಂದು ದಿಲೀಪ್ ಪಾಂಡೆ ಆರೋಪಿಸಿದ್ದಾರೆ. ಅಲ್ಲದೇ ಇದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋವನ್ನೂ ಬಿಡುಗಡೆ ಮಾಡಿದ್ದಾರೆ.
ಈ ವಿಡಿಯೋದಲ್ಲಿ ದಿಲೀಪ್ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ನಿಂತಿದ್ದಾಗ ಪಕ್ಕದಲ್ಲಿದ್ದ ಪೊಲೀಸ್ ಬಸ್ಸೊಂದು ನಿಯಂತ್ರಣ ತಪ್ಪಿತ್ತು. ಮಂಗಳವಾರ ರಾತ್ರ್ರಿ ಈ ಘಟನೆ ನಡೆದಿದೆ. ಪೊಲೀಸರು ಎಎಪಿ ವಿರುದ್ಧ ತೆಗೆದುಕೊಳ್ಳುತ್ತಿರುವ ಕ್ರಮದ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ದಿಲೀಪ್ ಹೇಳಿಕೊಂಡಿದ್ದಾರೆ.
ಈ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದು, ಬಸ್ನ ಹ್ಯಾಂಡ್ ಒಡೆದು ಹೋದ ಪರಿಣಾಮ ನಿಯಂತ್ರಣ ತಪ್ಪಿದೆ ಎಂದಿದ್ದಾರೆ. ಅಲ್ಲದೇ ಎಎಪಿ ಪಕ್ಷ ಸಂಶಯಗ್ರಸ್ತವಾಗಿದೆ ಎಂದು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.